ಸಮಗ್ರ ನ್ಯೂಸ್: ತನಿಖೆಗೆ ಆದೇಶ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಕೊಡಗು ಏಕೀಕರಣ ರಂಗವು ಈ ನಿಟ್ಟಿನಲ್ಲಿ ಗಮನ ಸೆಳೆದಿತ್ತು.
ಮುಂಡ್ರೋಟು ಮೀಸಲು ಅರಣ್ಯದಲ್ಲಿ ನೂರಾರು ಮರಗಳನ್ನು ಕಡಿದು ಹಾಕಿರುವ ಬಗ್ಗೆ ಕೊಡಗು ಏಕೀಕರಣ ರಂಗ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ದೂರು ಸಲ್ಲಿಸಿದ್ದ ಹಿನ್ನಲೆ ಪೊನ್ನಣ್ಣ ಅವರ ಗಮನ ಸೆಳೆಯುವ ಸೂಚನೆ ಮೇರೆಗೆ ಇದೀಗ ಮರಗಳ ಹನನ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿರುವ ಸಚಿವ ಖಂಡ್ರೆ
ಈಗಾಗಲೇ ಪ್ರಕರಣದ ಬಗ್ಗೆ ಎಫ್ ಐ ಆರ್ ದಾಖಲಾಗಿದ್ದು, ಅರಣ್ಯ ಇಲಾಕಾಧಿಕಾರಿಗಳು ಪ್ರಾಥಮಿಕ ತನಿಖೆ ಕೈಗೊಂಡಿದ್ದಾರೆ.
ಹೀಗಿದ್ದರೂ ಇದೊಂದು ಗಂಭೀರ ಪ್ರಕರಣವಾಗಿರುವುದರಿಂದಾಗಿ ಹೆಚ್ಚಿನ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದಾರೆ.