ನವದೆಹಲಿ: ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಸಮಗ್ರ ನ್ಯೂಸ್ : ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

Ad Widget ... ..

ದೆಹಲಿಯಿಂದ ಬೆಂಗಳೂರಿಗೆ ಮೇ 17ರಂದು ಸಂಜೆ 6 ಗಂಟೆಗೆ ಏರ್ ಇಂಡಿಯಾ ವಿಮಾನ ಹೊರಟಿತ್ತು. ಈ ವೇಳೆ ವಿಮಾನದ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ 6:38 ಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.

Ad Widget

175 ಪ್ರಯಾಣಿಕರೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ವಿಮಾನ ಹೊರಟಿತ್ತು. ವಿಮಾನ ದೆಹಲಿಗೆ ಮರಳಿ ಸುರಕ್ಷಿತ ಲ್ಯಾಂಡಿಂಗ್ ಮಾಡಿದೆ.ಪ್ರಯಾಣಿಕರು ಬೆಂಗಳೂರಿಗೆ ತೆರಳಲು ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫ್ಲೈಟ್ ಟ್ರ್ಯಾಕಿಂಗ್ ವೆಬ್ಸೈಟ್ ಫ್ಲೈಟ್ರಾಡಾರ್ 24 ರಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ವಿಮಾನವನ್ನು A321 ಏರ್ಕ್ರಾಫ್ಟ್ನೊಂದಿಗೆ ನಿರ್ವಹಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *