Ad Widget .

ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಗೆಳೆಯ ಚಂದ್ರಕಾಂತ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಇತ್ತೀಚೆಗೆ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಈಗ ಅವರ ಗೆಳೆಯ, ನಟ ಚಂದ್ರಕಾಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget . Ad Widget .

ಆಂಧ್ರಪ್ರದೇಶದಲ್ಲಿನ ಅಲ್ಕಾಪುರ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ಚಂದ್ರಕಾಂತ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿದ್ದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Ad Widget . Ad Widget .

ಮೊನ್ನೆ ಪವಿತ್ರಾ ಜಯರಾಮ್‌ ಅವರ ಕಾರು ಅಪಘಾತದ ಸಂಧರ್ಭದಲ್ಲಿ ಅದೇ ಕಾರಿನಲ್ಲಿ ಚಂದ್ರಕಾಂತ್‌ ಅವರು ಕೂಡ ತೆರಳುತ್ತಿದ್ದಾರೆ. ಘಟನೆಯ ಬಳಿಕ ನೊಂದಿದ್ದ ಅವರು ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಟಿಯ ಅಗಲಿಕೆಯ ನೋವು ತಾಳದೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಚಂದುಗೆ ಶಿಲ್ಪಾ ಎಂಬವರ ಜೊತೆ ವಿವಾಹವಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಇದೀಗ ಇಬ್ಬರೂ ಸಾವಿಗೀಡಾಗಿರುವುದು ದುರಂತ.

Leave a Comment

Your email address will not be published. Required fields are marked *