Ad Widget .

ಪೆನ್ ಡ್ರೈವ್ ಕೇಸಲ್ಲಿ ದೇವರಾಜೇಗೌಡ ಸ್ಫೋಟಕ ಹೇಳಿಕೆ| ಡಿಕೆಶಿ 100 ಕೋಟಿ ರೂಪಾಯಿ ಆಫರ್‌

ಸಮಗ್ರ ನ್ಯೂಸ್: ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಮೇ 17 ರಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Ad Widget . Ad Widget .

ಇವರು ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಮಾತನಾಡಿದ್ದಲ್ಲ ಎಂದು ಹೇಳಿದರು. ಇದರಲ್ಲಿ ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ಹೇಳಿದ್ದಾರೆ. ಅದು ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

Ad Widget . Ad Widget .

ಇದೆಲ್ಲ ನಡೆದಿರುವುದು ಪ್ರಧಾನಿ ನರೇಂದ್ರ ಮೋದಿ, HDK ಅವರಿಗೆ ಕೆಟ್ಟ ಹೆಸರು ತರಲು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಬಿಗ್ ಬಾಂಬ್ ಸಿಡಿಸಿದ್ದಾರೆ.

Leave a Comment

Your email address will not be published. Required fields are marked *