ತಾಯಿ ಶವದ ಜೊತೆ 4 ದಿನ ಕಳೆದ ಮಗಳ ದುರಂತ ಅಂತ್ಯ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲಿ ತಾಯಿ ಮೃತಪಟ್ಟರೆ ಇತ್ತ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

Ad Widget ... ..

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತ ಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು. ಇದೇ ಸಂದರ್ಭದಲ್ಲಿ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

Ad Widget

Leave a Comment

Your email address will not be published. Required fields are marked *