ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

ಸಮಗ್ರ ನ್ಯೂಸ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ (ಮೇ.19) ರಂದು ವಾಯುವ್ಯ ಇರಾನ್​ನ ಜೋಲ್ಫಾದಲ್ಲಿ ಪತನವಾಗಿದೆ ಎಂದು ಇರಾನ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ad Widget ... ..

ಹವಾಮಾನ ವೈಪರೀತ್ಯ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಅಧ್ಯಕ್ಷ ರೈಸಿ ಜತೆ ಇರಾನ್ ವಿದೇಶಾಂಗ ಸಚಿವ ಹುಸೇನ್ ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವ ಹೂಸೈನ್ ಅಮಿರಾಬ್ದೊಲ್ಹೈನ್ ಇಬ್ಬರು ಪೂರ್ವ ಅಜರ್‌ಬೈಜಾನ್‌ನಲ್ಲಿ ಕಾರ್ಯಕ್ರಮಕ್ಕಾಗಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ದಟ್ಟ ಮಂಜು ಆವರಿಸಿರುವುದರಿಂದ ಹೆಲಿಕಾಪ್ಟರ್ ಅವಘಡದ ಶಂಕೆ ವ್ಯಕ್ತವಾಗಿದ್ದು, ಇರಾನ್ ನಾಯಕರ ಜೀವಕ್ಕೆ ಕುತ್ತು ಉಂಟಾಗಿರುವ ಆತಂಕ ಎದುರಾಗಿದೆ. ಈ ಹಿನ್ನಲೆ ಭೂಮಾರ್ಗದ ಮೂಲಕ ತಲುಪಿ ಕಾರ್ಯಾಚರಣೆ ನಡೆಸಲು ತೀರ್ಮಾನ ಮಾಡಲಾಗಿದೆ. ಆದರೆ ಹೆಲಿಕಾಪ್ಟರ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಅಧ್ಯಕ್ಷ ಇಬ್ರಾಹಿಂ ಹಾಗೂ ಹೊಸೈನ್ ಕುರಿತು ಮಾಹಿತಿಗಳು ಲಭ್ಯವಾಗಿಲ್ಲ.

Ad Widget

Leave a Comment

Your email address will not be published. Required fields are marked *