Ad Widget .

ರೈತರಿಗೆ ಶುಭ ಸುದ್ದಿ ನೀಡಿದ ಹವಾಮಾನ ಇಲಾಖೆ| ಭಾರತಕ್ಕೆ ಪ್ರವೇಶಿಸಿದ ಮುಂಗಾರು ಮಳೆ

ಸಮಗ್ರ ನ್ಯೂಸ್: ಕಳೆದ ವರ್ಷ ಬರದಿಂದ ಕಂಗೆಟ್ಟಿದ್ದ ರೈತರಿಗೆ ಪ್ರಸಕ್ತ ಹಂಗಾಮಿಗೆ ಶುಭ ಸುದ್ದಿ ಹೊರಬಿದ್ದಿದೆ. ಕೇಂದ್ರ ಹವಾಮಾನ ಇಲಾಖೆ ಪ್ರಕಾರ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ.

Ad Widget . Ad Widget .

ಲಾ ನಿನಾ ಪರಿಸ್ಥಿತಿಯಿಂದಾಗಿ ಪೆಸಿಫಿಕ್ ಸಾಗರದ ತಂಪಾಗುವಿಕೆಯು ಈ ವರ್ಷ ಉತ್ತಮ ಮಳೆಯಾಗಲು ಕಾರಣವಾಗುತ್ತದೆ. ನೈರುತ್ಯ ಮುಂಗಾರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಈಗಾಗಲೇ ತಲುಪಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬಹಿರಂಗಪಡಿಸಿದೆ.

Ad Widget . Ad Widget .

‘ನೈಋತ್ಯ ಮುಂಗಾರು ಮಾಲ್ಡೀವ್ಸ್‌ ಹಾಗೂ ಕಮೋರಿನ್‌ ದ್ವೀಪಗಳನ್ನು ದಾಟಿ ಬಂಗಾಳ ಕೊಲ್ಲಿಯ ನಿಕೋಬಾರ್‌ ದ್ವೀಪಗಳು ಹಾಗೂ ದಕ್ಷಿಣ ಅಂಡಮಾನ್‌ ಸಮುದ್ರದ ಮೇಲೆ ಭಾನುವಾರ ಮಳೆ ಸುರಿಸಿವೆ. ಕೇರಳಕ್ಕೆ ಮೇ 31ರಂದು ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದೆ’ ಎಂದು ಐಎಂಡಿ ಹೇಳಿದೆ.

Leave a Comment

Your email address will not be published. Required fields are marked *