ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್| ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್ ಮಾಡಿದ್ದ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

Ad Widget ... ..

ಶಾಂಪುರ ನಿವಾಸಿ ಸಿಲಂಬರಸನ್ (21) ಬಂಧಿತ ಯುವಕ. ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಸಿಲಂಬರಸನ್ ಬೈಕ್‌ ರೈಡ್ ಮಾಡಿದ್ದ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿತ್ತು. ಯುವ ಜೋಡಿಗಳು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ್ದರು. ಜೋಡಿಗಳ ಜಾಲಿ‌ ರೈಡ್‌ನ ದೃಶ್ಯ ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಯಲಹಂಕ ಸಂಚಾರ ಪೊಲೀಸ್ ಠಾಣೆ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ

Ad Widget

Leave a Comment

Your email address will not be published. Required fields are marked *