ಸಮಗ್ರ ನ್ಯೂಸ್: ಕಳೆದ 6 ತಿಂಗಳಿನಿಂದ ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಈಗ ಮತ್ತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿದ್ದು ಹವಾಮಾನ ಇಲಾಖೆ 14 ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಆರೆಂಜ್ ಅಲರ್ಟ್, ಉತ್ತರಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಚಾಮರಾಜನಗರದಲ್ಲಿ ಸೋಮವಾರ ಆರೆಂಜ್ ನಂತರದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ ಮೀ ಬಿರುಗಾಳಿ ಸಹಿತ ಹಗುರ ಹಾಗೂ ಸಾಧಾರಣ ಮಳೆಯಾಗಲಿದೆ. ಮುಂದಿನ 5 ದಿನ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಕರಾವಳಿಯಲ್ಲಿ ಪ್ರತಿಕೂಲ ಹವಾಮಾನದಿಂದ ಮುಂದಿನ ಐದು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಅಂತ ಹವಮಾನ ಇಲಾಖೆ ಸೂಚನೆ ನೀಡಿದೆ.