Ad Widget .

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ| ಬಂಟ್ವಾಳ ಮೂಲದ ಇಬ್ಬರು ದಾರುಣ ಸಾವು

ಸಮಗ್ರ ನ್ಯೂಸ್: ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ಒಂದರ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಇಬ್ಬರು ಸಾವನಪ್ಪಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ.

Ad Widget . Ad Widget .

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿಯಿಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟಿ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ 6.30ರ ಸಮಯದಲ್ಲಿ ಘಟನೆ ಸಂಭವಿಸಿದೆ.

Ad Widget . Ad Widget .

ಸಕಲೇಶಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಸಮೀಪದ ಬೊಂಡಾಲ ಗ್ರಾಮದ ಮೂಲದ ಶಬೀರ್ ಅಹಮದ್ ಎಂಬುವರ ಪತ್ನಿ ಶಫಿಯ (48) ಹಾಗೂ ಅವರ ಪುತ್ರ ಶಫೀಕ್ ( 21) ಎಂಬುವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಕಾರಿನಲ್ಲಿ ಮಕ್ಕಳು ಸೇರಿ ಇನ್ನೂ 6 ಮಂದಿ ಇದ್ದು ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *