ಸಮಗ್ರ ನ್ಯೂಸ್: ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ ಎಂದು ಬೆಳ್ತಂಗಡಿ ಶಾಸಕ (BJP MLA) ಹರೀಶ್ ಪೂಂಜಾ(harish poonja) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅವರು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದ ಪ್ರತಿಭಟನೆಯಲ್ಲಿ ಮಾತನಾಡುತ್ತಾ ಅವರು, ‘ದಕ್ಷಿಣ ಕನ್ನಡ ಎಸ್‍ಪಿಗೆ ತಲೆಯಲ್ಲಿ ಕೂದಲು ಇಲ್ಲಾಂತ ಮಾತ್ರ ಅಂದ್ಕೊಂಡಿದ್ದೆ, ಈಗ ನೋಡಿದ್ರೆ ಬುದ್ಧಿನೂ ಇಲ್ಲ. ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಇದೇ ವೇಳೆ ಅವರು ಮಾತನಾಡುತ್ತ ಇದೇ ವೇಳೇ ಅವರ, ‘ಕಾರ್ಯಕರ್ತರನ್ನು ಮುಟ್ಟಿದರೆ ಕಾಲರ್ ಹಿಡಿದು ಎಳೆದು ಹಾಕುತ್ತೇನೆ’ ಎಂದು ಪೊಲೀಸರ ವಿರುದ್ಧ ಅವಾಜ್ ಹಾಕಿದ್ದಾರೆ. ಕಾರ್ಯಕರ್ತರಿಗೆ, ಮತದಾರರಿಗೆ ಅನ್ಯಾಯವಾದದಲ್ಲಿ ತಾನು ಜೈಲಿನಲ್ಲಿ ಕುಳಿತುಕೊಳ್ಳಲು ರೆಡಿಯಿದ್ದೇನೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ತಲೆಯಲ್ಲಿ ಕೂದಲು ಮಾತ್ರವಲ್ಲ ಬುದ್ಧಿಯೂ ಇಲ್ಲ. ತಾನು ಅವರಿಗೆ ರಾತ್ರಿ ಎಷ್ಟು ಸಲ ಕಾಲ್ ಮಾಡಿದರೂ ನನ್ನ ಫೋನ್ ಕರೆಗೆ ಉತ್ತರಿಸಲಿಲ್ಲ ಅಂತ ಹೇಳಿದರು.
ಇನ್ನು ಬಿಜೆಪಿ ಶಾಸಕರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಕಾನೂನು ವಿರುದ್ಧ ನೀಡಿರುವ ಹರೀಶ್ ಪೂಂಜಾರ ಹೇಳಿಕೆ ವೈರಲ್ ಆಗುತ್ತಿದೆ.
ಏನಿದು ಪ್ರಕರಣ?:
ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಆರೋಪ ಮಾಡಿ ಶಾಸಕರು ಬೆಳ್ತಂಗಡಿ ಠಾಣೆಯೆದುರು ಧರಣಿ ನಡೆಸಿದ್ದರು. ಈ ವೇಳೆ ಪೊಲೀಸರ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಏನಿದು ಘಟನೆ ಅಂತ ನೋಡುವುದಾದರೆ, ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲಿನ ಕೋರೆಗೆ ತಹಶೀಲ್ದಾರ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತ್ತು. ಈ ವೇಳೆ ಅಕ್ರಮ ಕಲ್ಲು ಕೋರೆ ಆರೋಪ ಮೇರೆಗೆ ಗುರುವಾಯನಕೆರೆಯ ಬಿಜೆಪಿಯ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿಯವರನ್ನು ಪೊಲೀಸರು ಬಂಧನ ಮಾಡಿದ್ದು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರ ಧರಣಿ ನಡೆಸಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೇ ಮನೆಯಲ್ಲಿ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಠಾಣೆಯೆದುರು ಪ್ರತಿಭಟನೆ ನಡೆಸಿದ್ದರು.