Ad Widget .

ಪತಿಯಿಂದಲೇ ಬರ್ಬರ ಕೊಲೆಯಾದ ‘ಭಜರಂಗಿ’ ನಟಿ ವಿದ್ಯಾ ನಂದೀಶ್

ಸಮಗ್ರ ನ್ಯೂಸ್: ‘ಭಜರಂಗಿ’ ಸಿನಿಮಾದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

Ad Widget . Ad Widget .

ಪತಿ ನಂದೀಶ್ ತನ್ನ ಪತ್ನಿ ವಿದ್ಯಾರನ್ನು ಕೊಲೆ ಮಾಡಿದ್ದಾನೆ. ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

Ad Widget . Ad Widget .

ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *