ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನ ಬಂಧನ ಸಾಧ್ಯತೆ ವಿಚಾರವಾಗಿ ಕೆಂಡಾಮಂಡಲರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶಾಸಕರನ್ನು ಅರೆಸ್ಟ್ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದೆ ನಡೆಯುವುದಕ್ಕೆ ಕಾಂಗ್ರೆಸ್ ಹೊಣೆ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರೀಶ್ ಪೂಂಜಾ ಉದ್ವೇಗದಲ್ಲಿ ಕೆಲವು ಮಾತನಾಡಿದ್ದಾರೆ, ಅದು ತಪ್ಪು ಎಂದು ಅವರಿಗೂ ಗೊತ್ತಾಗಿದೆ, ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ ಕಾನೂನು ಸುವ್ಯವಸ್ಥೆ ಹದಗೆಡಲು ನೀವೆ ಕುಮ್ಮಕ್ಕು ನೀಡುತ್ತಿದ್ದಿರಿ ಎಂಧು ವಿಜಯೇಂದ್ರ ಕಿಡಿಕಾರಿದ್ದಾರೆ.
ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳಿಗೆ ಧಮ್ಕಿ ಹಾಕಿದ ಆರೋಪದಡಿ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಹೀಗಾಗಿ ಶಾಸಕರ ಬಂಧನಕ್ಕೆ ಪೊಲೀಸರು ಮುಂದಾಗಿದ್ದು ಹರೀಶ್ ಪೂಂಜಾ ನಿವಾಸಕ್ಕೆ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಗಣೇಶ್ ಕಾರ್ಣಿಕ್ ಹಾಗೂ ಇತರರು ಶಾಸಕರ ನಿವಾಸದತ್ತ ದೌಡಾಯಿಸಿದ್ದಾರೆ. ಜೊತೆಗೆಸಕ್ಕೆ ವಕೀಲರಾದ ಶಂಭು ಶರ್ಮ, ಅಜಯ್ ಸುವರ್ಣ ಕೂಡ ಆಗಮಿಸಿದ್ದು ಮಾತುಕತೆ ನಡೆಯುತ್ತಿದೆ.