Ad Widget .

‘ವಸಂತ ಬಂಗೇರ ಬಡವರ, ಸತ್ಯದ ಪರವಾಗಿದ್ದರು’| ಬೆಳ್ತಂಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ನುಡಿನಮನ

ಸಮಗ್ರ ನ್ಯೂಸ್: ‘ವಸಂತ ಬಂಗೇರ ಅವರು ಸದಾ ಬಡವರ ಪರ, ಸತ್ಯದ ಪರ ಇದ್ದರು. ಬಡವರ ಕೆಲಸ ಮಾಡಿಕೊಡಲು ಯಾವ ಹಂತಕ್ಕೆ ಬೇಕಾದರೂ ಹೋಗುತ್ತಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Ad Widget . Ad Widget .

ಅಗಲಿದ ಮಾಜಿ ಶಾಸಕ ದಿ.‌ವಸಂತ ಬಂಗೇರಗೆ ನುಡಿನಮನ ಸಲ್ಲಿಸಲು ತಾಲ್ಲೂಕಿನ ಕುವೆಟ್ಟುವಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Ad Widget . Ad Widget .

‘ಕ್ಷೇತ್ರದ ಅಭಿವೃದ್ಧಿ ವಿಚಾರಗಳಲದಲಿ ಬಂಗೇರ ಅವರಿಗೆ ತಾನು ಯಾರ ಜೊತೆ ಮಾತನಾಡುತ್ತಿದ್ದೇನೆ ಎನ್ನುವುದು ಮುಖ್ಯ ಆಗುತ್ತಿರಲಿಲ್ಲ. ಬಡವರ ಸಮಸ್ಯೆ ಪರಿಹರಿಸುವುದೇ ಅವರಿಗೆ ಮುಖ್ಯವಾಗಿತ್ತು.ಮಾನವಿಯತೆ ಇದ್ದ ಮನುಷ್ಯ. ಬದುಕನ್ನು ಸಾರ್ಥಕ ಮಾಡಿಕೊಂಡ ವ್ಯಕ್ತಿ’ ಎಂದು ಕೊಂಡಾಡಿದರು.

ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.

ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡವರು ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ ಎಂದರು.

Leave a Comment

Your email address will not be published. Required fields are marked *