ಸಮಗ್ರ ನ್ಯೂಸ್: ಉಡುಪಿ, ದಕ್ಷಿಣ ಕನ್ನಡ ಜಿಲಲೆಗಳು ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಮೇ 22ರಿಂದ 24ರವರೆಗೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ.
ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 22 ರಂದು ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆಯಲ್ಲೂ ನಡೆಯಿತು ದೈವನರ್ತನ:
ಕರಾವಳಿಯಲ್ಲಿ ಮುಂಗಾರು ಪೂರ್ವದ ಮಳೆ ಸುರಿಯುತ್ತಿದ್ದು, ಧಾರ್ಮಿಕ ಕಾರ್ಯಕ್ರಮಗಳು ಇನ್ನೂ ಕರಾವಳಿಯ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆ ಉಡುಪಿಯಲ್ಲಿ ನಡೆದ ದೈವ ಕೋಲದ ಸೇವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಡುಪಿಯ ಅಲೆವೂರಿನಲ್ಲಿ ಮಳೆ ಸುರಿಯುತ್ತಿದ್ದರೂ ಬಬ್ಬುಸ್ವಾಮಿ ದೈವದ ಕೋಲ ನಡೆದಿದೆ. ನೇಮೋತ್ಸವ ಆರಂಭವಾಗುತ್ತಲೇ ಮಳೆ ಜೋರಾಗಿದ್ದು ಮಳೆ ನಡುವೆಯೇ ದೈವ ನರ್ತಕರು ನರ್ತನ ಕೋಲ ಸೇವೆ ಮಾಡಿದ್ದಾರೆ. ಜೋರಾಗಿ ಮಳೆ ಸುರಿದರೂ ನರ್ತನ ನಿಲ್ಲಿಸಿಲ್ಲ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಳೆ ಬಂದರೂ ದೈವ ನರ್ತಕ ಕೋಲ ಸೇವೆಯನ್ನು ನಿಲ್ಲಿಸದೆ ಮುಂದುವರೆಸಿದ್ದು ಈ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.