ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಯ ಹಲವು ಕಡೆ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 23ರಿಂದ 25ರವರೆಗೆ ವ್ಯಾಪಕ ಮಳೆಯಾಗಲಿದೆ. ಮೇ 23 ರಂದು ಮೈಸೂರು, ಕೊಡಗು, ಮೇ 24 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದೇ ಮೇ 23ರಿಂದ 25ರ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಬುಧವಾರ ಬೆಳಗ್ಗೆ ಮೋಡಕವಿದ ವಾತಾವರಣ, ಮಧ್ಯಾಹ್ನ ಎಂದಿನಂತೆ ಬಿಸಿಲು ಕಂಡುಬಂದರೂ ಕೂಡ ಬಳಿಕ ಮೋಡ ಕವಿದ ವಾತಾವರಣದ ಮಧ್ಯೆ ಮಳೆ ಸುರಿದಿವೆ. ಸಂಜೆ ನಗರ ಮತ್ತು ಹೊರವಲಯದ ಹಲವೆಡೆ ಗುಡುಗು ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ.
ಬುಧವಾರ ಸಮುದ್ರವೂ ಪ್ರಕ್ಷುಬ್ದಗೊಂಡಿದ್ದು, ಅಲೆಗಳ ಅಬ್ಬರ ಕಂಡುಬಂದಿದೆ. ದ.ಕ. ಜಿಲ್ಲೆಯಲ್ಲಿ ಬುಧವಾರ ಸರಾಸರಿ 28.7 ಡಿಗ್ರಿ ಗರಿಷ್ಠ, 24.2 ಡಿಗ್ರಿ ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ.