Ad Widget .

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ಲವ್ ಸ್ಟೋರಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಲವ್ ಸ್ಟೋರಿಯನ್ನು ಬಿಚ್ಚಿಟ್ಟಿದ್ದಾರೆ.

Ad Widget . Ad Widget .

ಮೈಸೂರಿನಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ ಆದರೆ ಹುಡುಗಿಯೂ ಒಪ್ಪಲಿಲ್ಲ. ಅವರ ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು ಎಂದು ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿದರು. ಈ ರೀತಿಯಾಗಿ ತಮ್ಮ ಕಾಲೇಜು ದಿನಗಳ ಲವ್ ಸ್ಟೋರಿಯನ್ನು ವೇದಿಕೆ ಮುಖಾಂತರ ಮೆಲುಕು ಹಾಕಿದ್ದಾರೆ.

Ad Widget . Ad Widget .

ಇನ್ನೂ ಮಾತನಾಡಿದ ಅವರು ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ. ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ. ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು

Leave a Comment

Your email address will not be published. Required fields are marked *