Ad Widget .

ಎಲ್ಲಿದ್ದರೂ ಬೇಗ ಬಾ.. ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ| ಪ್ರಜ್ವಲ್ ಗೆ ದೇವೇಗೌಡರ ಖಡಕ್ ವಾರ್ನಿಂಗ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೆನ್ ಡ್ರೈವ್ ಪ್ರಕರಣ ಜೋರಾಗಿ ನಡೆಯುತ್ತಿದ್ದು ಇತ್ತ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡು ಓಡಾಡುತ್ತಿದ್ದಾನೆ ಎಂಬ ಮಾಹಿತಿಯೂ ಇದೆ. ಅದರಂತೆ ಪ್ರಜ್ವಲ್ ಗಾಗಿ ಹುಡುಕಾಟ ನಡೆಯುತ್ತಿದೆ. ಇತ್ತ ಮಾಜಿ ಪ್ರಧಾನಿ ದೇವೇಗೌಡ ಅವರು ಅಸಮಾಧಾನ ಹೊರಹಾಕಿದ್ದಾರೆ. ಪ್ರಜ್ವಲ್‌ ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ. ನೀನು ಎಲ್ಲಿಯೇ ಇದ್ದರೂ ಕೂಡಲೇ ಬಾ ಎಂದು ಫರ್ಮಾನು ಹೊರಡಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನನ್ನ ಮಾತು ಮೀರಿದರೆ ನೀನು ಒಬ್ಬಂಟಿಯಾಗುತ್ತೀಯಾ. ಎಲ್ಲಿದ್ದರೂ ಬೇಗ ಬಂದು ತಕ್ಷಣ ವಿಚಾರಣೆಗೆ ಹಾಜರಾಗು. ಇಲ್ಲವಾದರೆ ನನ್ನ ಮತ್ತು ಕುಟುಂಬಸ್ಥರೆಲ್ಲರ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಮೊಮ್ಮಗನಿಗೆ ತಾತ ಖಡಕ್ ಸಂದೇಶ ನೀಡಿದ್ದಾರೆ. ಪ್ರಜ್ವಲ್‌ನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ಆದರೆ, ಇದನ್ನೆಲ್ಲ ನಾನು ಈ ಹೊತ್ತಿನಲ್ಲಿ ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.

Ad Widget . Ad Widget . Ad Widget .

ದೇವೇಗೌಡರ ಪತ್ರದಲ್ಲಿ ಏನಿದೆ?
ನಾನು ಮೇ 18ರಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾಗಿ ಮಾತನಾಡಿದ್ದೆ. ಆತ ನನಗೆ ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ ಅವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನವೇ ಪ್ರತಿಪಾದಿಸಿದ್ದಾರೆ.
ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಅದರಲ್ಲಿ ಯಾವುದೇ ಭಾವನೆಗೆ ಸಿಲುಕದೆ ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ.

Leave a Comment

Your email address will not be published. Required fields are marked *