ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗ್ತಿದೆ ರೆಮಲ್ ಚಂಡಮಾರುತ| ಹಲವೆಡೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಈಗಾಗಲೇ 4 ದಿನದಿಂದ ಉತ್ತಮ ಮಳೆ ಆಗುತ್ತಿದೆ. ಬಂಗಾಳಕೊಳ್ಳಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಐದು ದಿನ ಬೆಂಗಳೂರು ಸೇರಿದಂತೆ ರಾಜ್ಯ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Ad Widget ... ..

ಮುಂದಿನ‌ 48 ಗಂಟೆಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ಸ್ ಉಷ್ಣಾಂಶ ಇರಲಿದೆ. ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡ ಪರಿಣಾಮ ಸೈಕ್ಲೋನ್ ಸೃಷ್ಟಿಯಾಗಿದೆ.

Ad Widget

ರಿಮಲ್ ಹೆಸರಿನ ಸೈಕ್ಲೋನ್ ಸೃಷ್ಟಿಯಾಗಲಿದ್ದು, ಇದು ಬಂಗಾಳ ಕೊಲ್ಲಿಯಲ್ಲಿ ಉತ್ತರಾಭಿಮುಖವಾಗಿ ಚಲಿಸಲಿದೆ. ಮೇ 26 ರಂದು ಪಶ್ಚಿಮ ಬಂಗಾಳ ಅಥವಾ ಬಾಂಗ್ಲಾದೇಶದ ಬಳಿ ಸೈಕ್ಲೋನ್ ಭೂ-ಸ್ಪರ್ಷ ಮಾಡಲಿದೆ.

ಸೈಕ್ಲೋನ್ ಪರಿಣಾಮವಾಗಿ ಪಶ್ಚಿಮ ಬಂಗಾಳ, ಒರಿಸ್ಸಾ, ತೆಲಂಗಾಣ, ಆಂಧ್ರ ಪ್ರದೇಶ, ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೈಕ್ಲೋನ್​ನಿಂದ ಮುಂಗಾರು ಮಳೆ ತೀವ್ರವಾಗುವ ಸಾಧ್ಯತೆಯೂ ಇದೆ. ಕರ್ನಾಟಕದ ಬಳ್ಳಾರಿ, ಬೆಳಗಾವಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Leave a Comment

Your email address will not be published. Required fields are marked *