Ad Widget .

ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ ಫೈನ್ ಹಾಕಿದ ಪೋಲಿಸರು…!

ಸಮಗ್ರ ನ್ಯೂಸ್: ಉತ್ತರ ಕನ್ನಡದಲ್ಲೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹೌದು ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು ವಿಥೌಟ್ ಹೆಲ್ಮೆಟ್ ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

Ad Widget . Ad Widget .

ಚಂದ್ರಕಾಂತ್ ಹಳ್ಳೇರ ಎಂಬವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು ಕ್ಷಣ ಶಾಕ್ ಆಗಿದ್ದಾರೆ. ಯಾಕಂದ್ರೆ ರಶೀದಿಯಲ್ಲಿ ಹಾಕಿರುವ ದಂಡ ವಿಥೌಟ್ ಹೆಲ್ಮೆಟ್ಗೆ. ಈ ಬಗ್ಗೆ ಚಾಲಕ ಚಂದ್ರಕಾಂತ್, ಸರ್ ನಾನು ಬೈಕ್ ಓಡಿಸುತ್ತಿಲ್ಲ. ಟಿಪ್ಪರ್ ಚಾಲನೆ ಮಾಡುತ್ತೇನೆ ಎಂದು ಪೊಲೀಸರನ್ನ ಪ್ರಶ್ನಿಸಿದ್ದಾರೆ. ಹೇ ಅದೆಲ್ಲಾ ಇರುತ್ತೆ ಎಂದು ಹೇಳಿ ರಶೀದಿ ಕೊಟ್ಟು ಕಳುಹಿಸಿದ್ದಾರೆ.

Ad Widget . Ad Widget .

ಸಮವಸ್ತ್ರ ಧರಿಸದಕ್ಕೆ ದಂಡ ಹಾಕುವ ಬದಲು ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ಹಾಕಿ ಸಂಚಾರಿ ಪೊಲೀಸರು ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ದಂಡದ ರಶೀದಿ ಎಲ್ಲೆಡೆ ವೈರಲ್ ಆಗಿದೆ. ನೆಟ್ಟಿಗರಂತು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿ ವ್ಯಂಗ್ಯ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಟ್ರೋಲ್ ಪೇಜ್ ನಲ್ಲಿ ವೈರಲ್ ಆಗುತ್ತಿದೆ.

Leave a Comment

Your email address will not be published. Required fields are marked *