Ad Widget .

ಪೋಲಿಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು|ಠಾಣೆಗೆ ನುಗ್ಗಿ ವಸ್ತುಗಳನ್ನು ಧ್ವಂಸ ಮಾಡಿದ ಸಂಬಂಧಿಕರು

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯ ಪೋಲಿಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಮೃತ ವ್ಯಕ್ತಿಯ ಸಂಬಂಧಿಕರು ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ ಘಟನೆ ನಡೆದಿದೆ. ಪೊಲೀಸ್ ಠಾಣೆಯ ಮುಂಭಾಗದಲ್ಲಿ ನೂರಾರು ಜನರು ಜಮಾಯಿಸಿದ್ದು, ಇದು ಲಾಕಪ್ ಡೆತ್ ಎಂದು ಆರೋಪಿಸುತ್ತಿದ್ದಾರೆ. ಪೊಲೀಸ್ ಜೀಪ್ ಎಳೆದು, ಠಾಣೆ ವ್ಯಾಪ್ತಿಯ ಎಲ್ಲಾ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ.

Ad Widget . Ad Widget .

ಮಟ್ಕಾ ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ ನನ್ನು ಪೊಲೀಸರು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆತಂದಿದ್ದ‌ರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಸಾವನ್ನಪ್ಪಿದ್ದಾನೆ. ಇದೀಗ ಅದಿಲ್‌ ಸಾವಿಗೆ ಪೊಲೀಸರೇ ಕಾರಣ ಎಂದು ಸಂಬಂಧಿಕರು ಆಕ್ರೋಶಗೊಂಡಿದ್ದಾರೆ.

Ad Widget . Ad Widget .

ಸಾವನ್ನಪ್ಪಿದ ಅರೋಪಿ ಸಂಬಂಧಿಕರನ್ನು ಚನ್ನಗಿರಿ ಡಿವೈಸ್ಪಿ ಪ್ರಶಾಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಸಧ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ

Leave a Comment

Your email address will not be published. Required fields are marked *