Ad Widget .

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ‌ ಸಾವು

ಸಮಗ್ರ ನ್ಯೂಸ್: ಪುತ್ತೂರಿನ ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget . Ad Widget .

ಮೃತ ಯುವತಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20).

Ad Widget . Ad Widget .

ಕೆಲವು ದಿನಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು. ದುರದೃಷ್ಟವಶಾತ್‌ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *