Ad Widget .

ಉಡುಪಿ: ರೆಬೆಲ್ ರಘುಪತಿ ಭಟ್ ಗೆ ಬಿಜೆಪಿಯಿಂದ ಗೇಟ್ ಪಾಸ್

ಸಮಗ್ರ ನ್ಯೂಸ್: ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

Ad Widget . Ad Widget .

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.

Ad Widget . Ad Widget .

ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *