ಹಾಸನ: ಡೆಡ್ಲಿ ಆಕ್ಸಿಡೆಂಟ್| 6 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಹಾಸನದ ಈಚನಹಳ್ಳಿ ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮಗು ಸೇರಿ ಆರು ಜನ ಮೃತಪಟ್ಟ ಘಟನೆ ನಡೆದಿದೆ. ಈ ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

Ad Widget ... ..

ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ.  ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad Widget

ಇವರೆಲ್ಲ ಚಿಕ್ಕಬಳ್ಳಾಪುರ ಮೂಲದವರು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Leave a Comment

Your email address will not be published. Required fields are marked *