Ad Widget .

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತಕ್ಕೆ 11 ಜನ ಸಾವು

ಸಮಗ್ರ ನ್ಯೂಸ್: ಉತ್ತರ ಪ್ರದೇಶದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಸ್‌ಗೆ ಟ್ರಕ್‌ ಡಿಕ್ಕಿಯಾಗಿ 11 ಜನ ಸ್ಥಳದಲ್ಲೇ ದುರ್ಮರಣ ಹೊಂದಿ 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Ad Widget . Ad Widget .

ನಿನ್ನೆ ರಾತ್ರಿ ಶಹಜಹಾನ್‌ಪುರ ಜಿಲ್ಲೆಯ ಖುತಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಉತ್ತರಾಖಂಡಕ್ಕೆ ತೆರಳುತ್ತಿದ್ದ ಬಸ್‌ಗೆ ಟ್ರಕ್ ಡಿಕ್ಕಿಯಾಗಿದೆ. ಇನ್ನು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಭಕ್ತರು ಸೀತಾಪುರ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೇಥಾ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *