ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ| ಇಬ್ಬರು ಸಾವು

ಸಮಗ್ರ ನ್ಯೂಸ್: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ರಸ್ತೆಯ ಸಬ್ಬಕೆರೆ ಗೇಟ್ ಬಳಿ ನಡೆದಿದೆ.

Ad Widget ... ..

ಬೈಕ್ ನಲ್ಲಿದ್ದ ಓರ್ವ ಮಹಿಳೆ ಹಾಗೂ ಬೈಕ್ ಚಾಲಕ ಸಾವನ್ನಪ್ಪಿದ್ದಾರೆ. ಮೃತರನ್ನು ಮಾಗಡಿ ತಾಲ್ಲೂಕಿನ ಹೊನ್ನಾಪುರ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ. ಇವರು ಕನಕಪುರದಿಂದ ರಾಮನಗರ ಕಡೆ ತೆರಳುತ್ತಿದ್ದರು. ರಾಮನಗರದಿಂದ ಕನಪುರಕ್ಕೆ ತೆರಳುತ್ತಿದ್ದ ಬಸ್ ಗೆ ಬೈಕ್ ಡಿಕ್ಕಿಯಾಗಿದೆ.

Ad Widget

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *