ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ| ದೂರುಕೊಟ್ಟ ಮಹಿಳೆ ಸಾವು

ಸಮಗ್ರ ನ್ಯೂಸ್: ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದವರು.

. Ad Widget . Ad Widget

ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆದರೆ ಇದೀಗ ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೂರುದಾರೆ, ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು ಇಂದು ಮೃತ ಪಟ್ಟಿದ್ದಾರೆ.

. Ad Widget . . Ad Widget . Ad Widget

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದು ರಾಜಕೀಯವಾಗಿ ತಿರುವು ಪಡೆದುಕೊಂಡಿತ್ತು. ಆದರೆ ನಂತರ ಈ ವಿಚಾರ ಮುನ್ನೆಲೆಗೆ ಬಂದಿಲ್ಲ.

Leave a Comment

Your email address will not be published. Required fields are marked *