Ad Widget .

ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರದಲ್ಲಿ ಅಕ್ರಮ: ದರ್ಶನ್ ಗೂ ಮೋಸ ಮಾಡಿದ ಖದೀಮ..!

ಸಮಗ್ರ ನ್ಯೂಸ್: ಅರ್ಜುನ ಆನೆ ಮೃತಪಟ್ಟು ಸುಮಾರು ಐದು ತಿಂಗಳು ಕಳೆದರೂ ಸ್ಮಾರಕ ನಿರ್ಮಾಣ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಆದರೆ ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರವನ್ನು ಇಟ್ಟುಕೊಂಡು ಓರ್ವ ವ್ಯಕ್ತಿ ಅಕ್ರಮವಾಗಿ ಹಣ ಸಂಗ್ರಹಿಸುತ್ತಿರುವ ಆರೋಪಿ ಇದೀಗ ಕೇಳಿ ಬಂದಿದೆ.

Ad Widget . Ad Widget .

ಮೈಸೂರು ಜಿಲ್ಲೆಯ ನವೀನ್ ಹೆಚ್.ಎನ್ ಎಂಬುವನು ಅರ್ಜುನ ಪಡೆ ಎಂಬ ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿ, ಅರ್ಜುನ ಸ್ಮಾರಕ ಹೋರಾಟಕ್ಕೆ ನಿಮ್ಮ ಬೆಂಬಲ ಬೇಕು ಎಂದು ಹಣಕ್ಕಾಗಿ ಸಹಾಯ ಕೇಳುತ್ತಿದ್ದಾನೆ. ಇದನ್ನು ನಂಬಿದ ಜನ ಹಣ ಸಹಾಯ ಮಾಡಿದ್ದಾರೆ. ಇದರಿಂದ ನವೀನ್ ಹೆಚ್ಎನ್ ಖಾತೆಗೆ ಲಕ್ಷಾಂತರ ಹಣ ಜಮೆ ಆಗಿದೆ ಎಂದು ಮಲೆನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಆರೋಪ ಮಾಡಿದ್ದಾರೆ. ಈತ ಹಣ ಸಂಗ್ರಹಿಸಿದ ಬಗ್ಗೆ ದೂರು ದಾಖಲಾಗಿದೆ.

Ad Widget . Ad Widget .

ಇಷ್ಟೇ ಅಲ್ಲದೆ ಅರ್ಜುನ ಆನೆ ಸ್ಮಾರಕ ನಿರ್ಮಾಣಕ್ಕೆ ಸಹಾಯ ಮಾಡುವಂತೆ ನವೀನ್ ನಟ ದರ್ಶನ್ ಅವರ ಪಿಎಯನ್ನೂ ಸಂಪರ್ಕ ಮಾಡಿದ್ದಾನೆ. ಅವರಿಂದ ಕಲ್ಲನ್ನು ತೆರೆಸಿಕೊಂಡಿದ್ದಾನೆ. ಈ ಕಲ್ಲನ್ನು ಅರಣ್ಯ ಇಲಾಖೆಯವರಿಗೆ 30 ಸಾವಿರ ರೂ.ಗೆ ಮಾರಿದ್ದಾನೆ ಅಂತ ಆರೋಪ ಕೇಳಿಬಂದಿದೆ. ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈತನ ಖಾತೆಗೆ ನೂರಾರು ಜನರು ಹಣ ಸಂದಾಯ ಮಾಡಿರುವ ಫೊಟೋಗಳು ವೈರಲ್ ಆಗಿದೆ.

Leave a Comment

Your email address will not be published. Required fields are marked *