ಸರ್ಕಾರಿ ಶಾಲೆ ಶಿಕ್ಷಕನಿಂದ ಅತ್ಯಾಚಾರ| 7ನೇ ಕ್ಲಾಸ್ ವಿದ್ಯಾರ್ಥಿನಿ ಗರ್ಭಿಣಿ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಕನಿಂದಲೇ 7ನೇ ತರಗತಿ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ. ಈ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ. ಇದೀಗ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿನಿಯ ಮೇಲೆ ಶಿಕ್ಷಕ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಈ ಹಿನ್ನೆಲೆಯಲ್ಲಿ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಇನ್ನು  ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ವಿದ್ಯಾರ್ಥಿನಿಯನ್ನು ಮಹಿಳಾ ಅಧಿಕಾರಿಗಳು ರಕ್ಷಿಸಿ ಆಪ್ತ ಸಮಾಲೋಚನೆ ನಡೆಸಿದ್ದಾರೆ.

. Ad Widget . Ad Widget . Ad Widget

ಕಳೆದ 5 ತಿಂಗಳುಗಳಿಂದ ವಿದ್ಯಾರ್ಥಿನಿ ಪಿರಿಯಡ್ ಆಗದ ಕಾರಣ ಪೋಷಕರು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ಆಗ ವಿದ್ಯಾರ್ಥಿನಿ ಮೂರು ತಿಂಗಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೋಷಕರು ವಿದ್ಯಾರ್ಥಿಯನ್ನು ಪ್ರಶ್ನಿಸಿದಾಗ ಶಾಲೆ ಮುಖ್ಯ ಶಿಕ್ಷಕ ವೆಂಕಟೇಶ್ ಅತ್ಯಾಚಾರ ಎಸಗಿರುವುದನ್ನು ಹೇಳಿದ್ದಾಳೆ. ಶಾಲೆಯ ಮುಖ್ಯ ಶಿಕ್ಷಕ ಜಿ.ವೆಂಕಟೇಶ ಕಳೆದ ಆರು ತಿಂಗಳುಗಳಿಂದ ಅತ್ಯಾಚಾರ ಎಸಗಿದ್ದಾರೆ. ಶಾಲೆಯ ಕಚೇರಿ ಕೊಠಡಿಯಲ್ಲಿ ಅತ್ಯಾಚಾರ ಮಾಡಿದ್ದಾರೆ. ಬೇಡವೆಂದು ವಿರೋಧ ಮಾಡಿದರೂ ಸಹ ಉದ್ರೇಕಗೋಳಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ಹೇಳಿಕೆ ನೀಡಿದ್ದಾಳೆ. ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ

. Ad Widget .

Leave a Comment

Your email address will not be published. Required fields are marked *