ಜೂ.1 ರಿಂದ 3 ರವರೆಗೆ ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ- 2024ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.

Ad Widget ... ..

ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮ್ಯದದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾ‌ರ್ ಹೊಟೇಲ್‌ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *