Ad Widget .

ತುಮಕೂರು: ಪತ್ನಿಯನ್ನು ಕೊಲೆಗೈದು ಚರ್ಮ ಸುಲಿದ ಕ್ರೂರಿ ಪತಿ…!

ಸಮಗ್ರ ನ್ಯೂಸ್: ದೆಹಲಿಯಲ್ಲಿ ಶ್ರಧ್ಧಾ ವಾಕರ್ ಭೀಕರ ಕೊಲೆ ಪ್ರಕರಣ ಇಡೀ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು. ಆದರೆ ಇದೇ ತರಹದ ಘಟನೆ ತುಮಕೂರಿನ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ.

Ad Widget . Ad Widget .

ಇಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಭೀಕರವಾಗಿ ಕೊಲೆ ಮಾಡಿ ಪತ್ನಿಯ ಕತ್ತು ಹಾಗೂ ದೇಹದ ಇತರ ಅಂಗಾಂಗಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ (32), ಮೃತ ದುರ್ದೈವಿ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬಾತನೇ ಕೃತ್ಯ ಎಸಗಿದ್ದಾನೆ.

Ad Widget . Ad Widget .

ಶಿವರಾಮ್ ಪುಷ್ಪ ಎಂಬವರನ್ನು ಮದುವೆಯಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮರದ ಮಿಲ್ಲೊಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ. ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಸೋಮವಾರ ರಾತ್ರಿ ಕೂಡ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು. ಇದೇ ವೇಳೆ ಶಿವರಾಮ್ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದಾನೆ. ಇನ್ನೂ ಪೋಲಿಸರು ಆರೋಪಿ ಶಿವರಾಮ್ ನನ್ನು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *