Ad Widget .

ಮುಂಗಾರು ಪೂರ್ವ ಮಳೆಯಬ್ಬರ| ಕೇರಳದಲ್ಲಿ 6 ಸಾವು

ಸಮಗ್ರ ನ್ಯೂಸ್: ಮಂಗಳವಾರ ಸುರಿದ ಮುಂಗಾರುಪೂರ್ವ ಮಳೆಗೆ ಕೊಚ್ಚಿ ನಗರ ಸೇರಿದಂತೆ ಕೇರಳದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಕೋಟ್ಟಾಯಂ ಜಿಲ್ಲೆಯ ಭರಣಂಙಾನಂ ಬಳಿ ಭೂಕುಸಿತ ಸಂಭವಿಸಿದೆ. ಆದರೆ ಜೀವಹಾನಿ ವರದಿಯಾಗಿಲ್ಲ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ತಿರುವನಂತಪುರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕಾಸರಗೋಡು, ಆಲಪ್ಪುಳ, ಎರ್ನಾಕುಳಂ ಮತ್ತು ಕೋಟಯಂ ಜಿಲ್ಲೆಗಳಲ್ಲಿ ತಲಾ ಒಬ್ಬರು ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಳೆದ ವಾರ ಮಳೆಯಿಂದ ಆದ ಅವಘಡಗಳಿಗೆ ತುತ್ತಾಗಿ ಐದು ಮಂದಿ ಮೃತಪಟ್ಟಿದ್ದರು.

Ad Widget . Ad Widget . Ad Widget .

ಕೋಟಯಂ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿದ ಪರಿಣಾಮವಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೋಟಯಂ ಮತ್ತು ಇಡುಕ್ಕಿ ಜಿಲ್ಲಾ ಆಡಳಿತವು ಎತ್ತರದ ಘಟ್ಟ ಪ್ರದೇಶಗಳಲ್ಲಿ ಸಂಚಾರಕ್ಕೆ ನಿರ್ಬಂಧಗಳನ್ನು ಹೇರಿವೆ.

ಕೇಂದ್ರ ಹವಾಮಾನ ಇಲಾಖೆಯು ಕೋಟಯಂ ಹಾಗೂ ಎರ್ನಾಕುಳಂ ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಘೋಷಿಸಿದೆ.

Leave a Comment

Your email address will not be published. Required fields are marked *