ಸಮಗ್ರ ನ್ಯೂಸ್: ಚುನಾವಣಾ ಪ್ರಚಾರ ಮುಗಿಯುತ್ತಿದ್ದಂತೆ ಮೋದಿ ಅವರು ವಿಶ್ರಾಂತಿಗಾಗಿ ಆಧ್ಯಾತ್ಮಿಕದತ್ತ ಮುಖ ಮಾಡಲಿದ್ದಾರೆ. ಮೇ 30 ರಿಂದ ಜೂನ್ 1ನೇ ತಾರೀಖಿನವರೆಗೆ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಇರಲಿದ್ದಾರೆ. ಪ್ರಸಿದ್ಧ ವಿವೇಕಾನಂದ ಸ್ಮಾರಕದಲ್ಲಿ ಹಗಲು-ರಾತ್ರಿ ಧ್ಯಾನದಲ್ಲಿ ತೊಡಗಲಿದ್ದಾರೆ ಎನ್ನಲಾಗುತ್ತಿದೆ.
ಪ್ರಧಾನಮಂತ್ರಿಯವರು ಗುರುವಾರ ಸಂಜೆ ಕನ್ಯಾಕುಮಾರಿಯ ಸಮುದ್ರ ಮಧ್ಯೆದಲ್ಲಿರುವ ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲೆಯ ಪ್ರತಿಮೆಯ ಸಮೀಪದಲ್ಲಿರುವ ಸುಂದರವಾದ VRM ಗೆ ಆಗಮಿಸುವ ನಿರೀಕ್ಷೆಯಿದೆ. ಜೂನ್ 1 ರಂದು ದೆಹಲಿಗೆ ತೆರಳಬಹುದು. ಅವರ ಭೇಟಿ ವೇಳೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ.
ಮೋದಿ ಅವರ ವೇಳಾಪಟ್ಟಿಯನ್ನು ನಾವು ಒಂದು ದಿನ ಮುಂಚಿತವಾಗಿ ತಿಳಿಯುತ್ತೇವೆ ಎಂದು ಬಿಜೆಪಿ ವರಿಷ್ಠರು ಪಿಟಿಐಗೆ ತಿಳಿಸಿದ್ದಾರೆ. ಮೋದಿಯವರು ತಮ್ಮ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಕನ್ಯಾಕುಮಾರಿಯ ಸ್ಥಳವನ್ನು ಆಯ್ಕೆ ಮಾಡಿದ್ದಾರೆ. ಇದು ದೇಶಕ್ಕಾಗಿ ವಿವೇಕಾನಂದರ ದೃಷ್ಟಿಕೋನವನ್ನು ಕಾರ್ಯರೂಪಕ್ಕೆ ತರುವ ಅವರ ಬದ್ಧತೆಯನ್ನು ತೋರಿಸುತ್ತದೆ ಎಂದು ಪಕ್ಷದ ಪದಾಧಿಕಾರಿಗಳು ಹೇಳಿದ್ದಾರೆ.