ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ಡೆತ್ನೋಟ್ ಬರೆದಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್(52) ನೇಣಿಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತ ರಾಜ್ಯ ಸರ್ಕಾರ, ಡೆತ್ ನೋಟ್ ನಲ್ಲಿ ನಮೂದಿಸಿದ್ದ ಮೂರು ಜನ ಅಧಿಕಾರಿಗಳಲ್ಲಿ ಇಬ್ಬರಾದ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ.
ಈ ಪ್ರಕರಣವನ್ನು ಮೊನ್ನೆಯೆ CIDಗೆ ವಹಿಸಲಾಗಿತ್ತು . ಈಗ ಶಿವಮೊಗ್ಗ ಮತ್ತು ಬೆಂಗಳೂರು ಎರಡು ಕಡೆಗಳಲ್ಲಿ CID ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸರ್ಕಾರದ ಪೂರ್ವ ಅನುಮತಿ ಪಡೆದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಎಂ.ಡಿ , ಸಿಇಓ ಹಾಗೂ ಎಲ್ಲಾ ನಿರ್ದೇಶಕರು ಸೇರಿದಂತೆ 6 ಜನ ಬ್ಯಾಂಕ್ ಅಧಿಕಾರಿಗಳ ವಿರುದ್ಧ FIR ದಾಖಲಿಸಿದ್ದಾರೆ. ಎಫ್. ಎಸ್. ಎಲ್ ಮತ್ತು ಸಿ. ಐ. ಡಿ ವರದಿ ಬಂದ ತಕ್ಷಣವೇ ಕಾನೂನು ರೀತಿಯಲ್ಲಿ ಎಲ್ಲರಿಗೂ ಕಠಿಣ ಶಿಕ್ಷೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.
ಇನ್ನೂ ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ ಅಮಾನತು ಬೆನ್ನಲ್ಲೇ ಮತ್ತೊಬ್ಬ ಎಂಡಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನ ಪ್ರಭಾರಿ ಎಂಡಿ ಆಗಿ ನೇಮಿಸಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ರಾಜ್ ಕುಮಾರ್, ಈಗ ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಹೆಚ್ಚುವರಿ ಪ್ರಭಾರಿಯಾಗಿ ನೇಮಿಸಲಾಗಿದೆ.