Ad Widget .

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿರುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಲಿ ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಟೀಕಿಸಿದ್ದಾರೆ.

Ad Widget . Ad Widget .

ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಮ್ಮ ಆಸ್ತಿಯನ್ನು ಕಸಿದುಕೊಂಡು ಹೆಚ್ಚು ಮಕ್ಕಳಿರುವವರಿಗೆ ಹಂಚುವುದಾಗಿ ಹೇಳಿದೆ. ಈ ದೇಶದ ಪ್ರಧಾನಿಯಾಗಿದ್ದವು ಹಿಂದೊಮ್ಮೆ ದೇಶದ ಸಂಪತ್ತಿನ ಮೊದಲ ಹಕ್ಕು ಅಲ್ಪಸಂಖ್ಯಾತರದ್ದು ಎಂದಿದ್ದರು’ ಎಂದು ಟೀಕಾ ಪ್ರಹಾರ ನಡೆಸಿದ್ದರು. ಈ ಮೂಲಕ ಮನಮೋಹನ್ ಸಿಂಗ್ ಅವರಿಗೂ ಟಾಂಗ್ ಕೊಟ್ಟಿದ್ದರು.

Ad Widget . Ad Widget .

ಈಗ ಅದೇ ವಿಚಾರವಾಗಿ ಮನಮೋಹನ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ‘ಚುನಾವಣೆ ಸಂದರ್ಭದಲ್ಲಿ ಬಂದತಂಹ ಹೇಳಿಕೆಗಳನ್ನು ನಾನು ಎಚ್ಚರಿಕೆಯಿಂದ ಗಮನಿಸುತ್ತಿದ್ದೆ. ಮೋದಿಜಿ ಸದಾ ಧ್ವೇಷದ ಬೀಜ ಬಿತ್ತುವ ಭಾಷಣಗಳನ್ನು ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿ ಹುದ್ದೆಗೆ ಅದರದ್ದೇ ಆದ ಗಾಂಭೀರ್ಯತೆಯಿದೆ. ಆದರೆ ಮೋದಿ ಆ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ವ್ಯಕ್ತಿ. ಒಬ್ಬ ಪ್ರಧಾನಿ ಎಂಬುದನ್ನೂ ಮರೆತು ಅವರು ವಿಪಕ್ಷಗಳ ವಿರುದ್ಧ ಅತ್ಯಂತ ಕೀಳುಮಟ್ಟದ ಟೀಕೆ ಮಾಡುತ್ತಾ ಬಂದಿದ್ದಾರೆ. ನಾನು ಪ್ರಧಾನಿಯಾಗಿದ್ದಾಗ ಯಾವತ್ತೂ ಒಂದು ಸಮುದಾಯವನ್ನು ಕಡೆಗಣಿಸಿ ಮತ್ತೊಂದು ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿಲ್ಲ’ ಎಂದಿದ್ದಾರೆ.

ಈ ದೇಶದಲ್ಲಿ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಒದಗಿಸಿಕೊಡಲು ಸಾಧ್ಯವಾಗುತ್ತದೆ ಎಂದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಂದ ಮನಮೋಹನ್ ಸಿಂಗ್ ಪಂಜಾಬ್ ಮತದಾರರಿಗೆ ಅಭಿವೃದ್ಧಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಿಂದ ಮತ ಹಾಕಿ ಎಂದು ಕರೆ ನೀಡಿದ್ದಾರೆ.

Leave a Comment

Your email address will not be published. Required fields are marked *