Ad Widget .

ಉಡುಪಿ: ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಸಮಗ್ರ ನ್ಯೂಸ್‌ : ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು, ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕೆ ನಡೆಸುವಂತಿಲ್ಲ.

Ad Widget . Ad Widget .

ಯಾಂತ್ರೀಕೃತ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿ ಮೀನುಗಾರಿಕೆಗೆ ಅನುಮತಿ ನೀಡಲಾಗಿದೆ.

Ad Widget . Ad Widget .

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರ ಮೇಲೆ ದಂಡ ವಿಧಿಸಲಾಗುತ್ತದೆ.ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಹಿನ್ನೆಲೆಯಲ್ಲಿ ಮಲ್ಪೆಯ ಸರ್ವ ಋತು ನಂದರಿನಲ್ಲಿ ಸಾವಿರಕ್ಕೂ ಮಿಕ್ಕಿ ಬೋಟುಗಳು ಲಂಗರು ಹಾಕಿವೆ.

Leave a Comment

Your email address will not be published. Required fields are marked *