ಸಮಗ್ರ ನ್ಯೂಸ್: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಮುಖಂಡ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಬಂಧಿಸಲಾಗಿದೆ.
ಹಾಸನದ 33 ವರ್ಷದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅವರ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ವಿಮಾನ ನಿಲ್ದಾಣದಿಂದ ವಶಕ್ಕೆ ತೆಗೆದುಕೊಂಡಿದೆ. ದೇಶವನ್ನು ತೊರೆದ ಸುಮಾರು ಒಂದು ತಿಂಗಳ ನಂತರ ಅವರು ಗುರುವಾರ ಮಧ್ಯರಾತ್ರಿ ಜರ್ಮನಿಯಿಂದ ಭಾರತಕ್ಕೆ ಮರಳಿದರು.
ಇಂದು ಬೆಂಗಳೂರಿನ 42 ನೇ ಎಸಿಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎನ್ ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಿದರು, ಈ ವೇಳೆ ಎಸ್ಐಟಿ (SIT) ಪರ ಎಸ್ಪಿಪಿ ಅಶೋಕ್ ನಾಯಕ್ ಅವರು ವಾದ ಮಂಡನೆ ಮಾಡಿದರು. 15 ದಿನಗಳ ಕಾಲ ಎಸ್ಐಟಿ (SIT) ಕಸ್ಟಡಿಗೆ ನಿಡುವಂತೆ ಮನವಿ ಮಾಡಿದರು,. ಆದರೆ ನ್ಯಾಯಾಧೀಶರು 6 ದಿನಗಳ ಕಾಲ ಎಸ್ಐಟಿ(SIT) ಕಸ್ಟಡಿಗೆ ನೀಡಿ ಆದೇಶವನ್ನು ಹೊರಡಿಸಿದರು.