Ad Widget .

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ| ಯಾವುದೇ ಕ್ಷಣ ಬಂಧನದ ಸಾಧ್ಯತೆ

ಸಮಗ್ರ ನ್ಯೂಸ್: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

Ad Widget . Ad Widget .

ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ಆರು ದಿನ ಎಸ್​​ಐಟಿ ವಶಕ್ಕೆ ನೀಡಿದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

Ad Widget . Ad Widget .

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ಭವಾನಿ ಅವರಿಗೆ ತನಿಖೆಗೆ ಹಾಜರಾಗುವಂತೆ 15 ದಿನಗಳ ಹಿಂದೆ ನೋಟಿಸ್​ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸದ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಏತನ್ಮಧ್ಯೆ ಶುಕ್ರವಾರ ಬೆಳಗ್ಗೆ ಎಸ್​ಐಟಿ ಅಧಿಕಾರಿಗಳೂ ಭವಾನಿ ಅವರಿಗೆ ಎರಡನೇ ನೋಟಿಸ್​ ನೀಡಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ನೋಟಿಸ್ ಅಂಟಿಸಿ ಬಂದಿದ್ದರು. ಇದೀಗ ಕೋರ್ಟ್​​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

Leave a Comment

Your email address will not be published. Required fields are marked *