Ad Widget .

ಸ್ಪೋಕನ್ ಇಂಗ್ಲಿಷ್ ಕ್ಲಾಸ್/ ಸರ್ಕಾರಿ ಶಾಲೆಗಳಲ್ಲಿ ಶುರುವಾದ ತಯಾರಿ

ಸಮಗ್ರ ನ್ಯೂಸ್: “How to make English easy” ಎಂಬ ಪರಿಕಲ್ಪನೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಶುರು ಮಾಡಲು ತಯಾರಿ ನಡೆದಿದ್ದು, ಈ ಯೋಜನೆಯನ್ನು ರೂಪಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ

Ad Widget . Ad Widget .

2024- 25ರ ಶೈಕ್ಷಣಿಕ ವರ್ಷದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‍ಇಎಲ್) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪ್ರತಿ ಶನಿವಾರ ನಡೆಸಲು ಸಿದ್ಧತೆ ನಡೆದಿದೆ.
ಈ ಹಿಂದೆ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರು ಮಾಡಿರುವುದು ಸಾಕಷ್ಟು ಸದ್ದು ಮಾಡಿತ್ತು.

Ad Widget . Ad Widget .

2024-25ರ ಶೈಕ್ಷಣಿಕ ವರ್ಷದಿಂದ ಸ್ಪೋಕನ್ ಕ್ಲಾಸ್ ಶುರುವಾಗಲಿದೆ. ಸರ್ಕಾರಿ ಶಾಲೆಗಳಲ್ಲಿರುವ ಇಂಗ್ಲಿಷ್ ಶಿಕ್ಷಕರಿಂದ ಸ್ಪೋಕನ್ ಇಂಗ್ಲಿಷ್ ಪಾಠ ಮಾಡಲಾಗುತ್ತದೆ. ಈ ಬಗ್ಗೆ ವಿಶೇಷ ತರಬೇತಿಯನ್ನು ನೀಡಲಾಗಿದ್ದು, ಮಕ್ಕಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಶುರು ಮಾಡಲಾಗುತ್ತದೆ. ಈ ಮೂಲಕ ಸರಕಾರಿ ಶಾಲೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ ಆಗಿರುವ ಇಂಗ್ಲಿಷ್ ಭಾಷೆಯನ್ನು ಕರಗತಗೊಳಿಸಲು ಇದು ಸಹಕಾರಿ ಆಗಲಿದೆ.

ಪ್ರತಿ ಶನಿವಾರದ 3ನೇ ತರಗತಿಯನ್ನು ಸ್ಪೋಕನ್ ಇಂಗ್ಲಿಷ್‍ಗೆ ಮೀಸಲಿಡಲಾಗುತ್ತದೆ. ಸುಮಾರು 40 ನಿಮಿಷದ ಅವಧಿಯಲ್ಲಿ ಮಕ್ಕಳು ಇಂಗ್ಲಿಷ್‍ನಲ್ಲಿ ಮಾತ್ರ ಮಾತನಾಡಬೇಕು. ಈ ಮೂಲಕ ವಿದ್ಯಾರ್ಥಿಗಳು, ಸಹಜವಾಗಿ ಇಂಗ್ಲಿಷ್ ಕಲಿಯಲು ಪೂರಕ ವಾತಾವರಣವನ್ನು ಸೃಷ್ಟಿಸಬೇಕೆಂಬ ಸೂಚನೆ ನೀಡಲಾಗಿದೆ.

Leave a Comment

Your email address will not be published. Required fields are marked *