“ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ”- ಡಿಕೆಶಿ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ಚುನಾವಣೆ ಇನ್ನೇನು ಕೆಲವು ದಿನಗಳಷ್ಟೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್‌ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. “ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿದೆ” ಎಂಬುದಾಗಿ ಹೇಳಿಕೆ ನೀಡಿರುವುದು ಈಗ ಸಂಚಲನ ಮೂಡಿಸಿದೆ.

Ad Widget ... ..

ಕೇರಳದಲ್ಲಿ ನನ್ನ ಮೇಲೆ, ಸಿದ್ದರಾಮಯ್ಯ ಅವರ ಮೇಲೆ ಹಾಗೂ ನಮ್ಮ ಸರ್ಕಾರದ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಸುತ್ತಮುತ್ತ ಯಾಗ ನಡೆಯುತ್ತಿದೆ. ನನ್ನ ಹಾಗೂ ಸಿಎಂ ಮೇಲೆ ಯಾವ ಪೂಜೆ ನಡೆಯುತ್ತಿದೆ ಎಂಬುದು ಕೂಡ ಗೊತ್ತಿದೆ” ಎಂದು ಹೇಳಿದ ಅವರು ಯಾರೋ ಬರೆದು ಕೊಟ್ಟಿದ್ದಾರೆ ಎಂಬುದಾಗಿ ಜೇಬಿನಲ್ಲಿರುವ ಚೀಟಿಯನ್ನು ತೆಗೆದು ನೋಡಿದ್ದಾರೆ.

Ad Widget

ಶತ್ರು ಭೈರವಿ ಯಾಗಕ್ಕಾಗಿ ಪಂಚ ಬಲಿ ಕೊಡುತ್ತಿದ್ದಾರೆ. 21 ಕಪ್ಪು ಮೇಕೆ, 3 ಎಮ್ಮೆ, 21 ಕುರಿ, 5 ಹಂದಿ ಹಾಗೂ ಕೋಣವನ್ನು ಬಲಿ ಕೊಡುತಿದ್ದಾರೆ. ಈಗ ಯಾಗ ನಡೆಯುತ್ತಿದ್ದು, ಅವರ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಆದರೆ, ನಾವು ನಂಬಿದ ದೇವರು ನಮ್ಮನ್ನು ಕಾಪಾಡುತ್ತಾನೆ. ಎಲ್ಲ ಡೀಟೇಲ್ಸ್‌ ಅನ್ನು ಚೀಟಿ ಬರೆದುಕೊಟ್ಟಿದ್ದಾರೆ. ಯಾರು ಭಾಗಿಯಾಗಿದ್ದರೋ ಅವರೇ ನನಗೆ ಮಾಹಿತಿ ಕೊಟ್ಟಿದ್ದಾರೆ. ಇದೆಲ್ಲವನ್ನು ರಾಜಕೀಯದವರಲ್ಲದೆ ಬೇರೆ ಯಾರು ಮಾಡಲು ಸಾಧ್ಯ. ಆದರೆ, ಇದೆಲ್ಲವನ್ನು ನಾವು ನಂಬುವುದಿಲ್ಲ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Leave a Comment

Your email address will not be published. Required fields are marked *