ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜೆಡಿಎಸ್ ಸಂಸದ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನನ್ನು ಕೊನೆಗೂ ಅರೆಸ್ಟ್ ಮಾಡಲಾಗಿದೆ.
ಅಶ್ಲೀಲ ವಿಡಿಯೊಗಳು ವೈರಲ್ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ, 34 ದಿನಗಳಾದ ಮೇಲೆ ಇಂದು ಭಾರತಕ್ಕೆ ಲುಫ್ತಾನ್ಸಾ ವಿಮಾನಯಾನ ಸಂಸ್ಥೆಯ ಎಲ್‌ಎಚ್764 ವಿಮಾನದಲ್ಲಿ ಆಗಮಿಸಿದರು. 12.47 ಕ್ಕೆ ಲುಫ್ತಾನ್ಸಾ ವಿಮಾನ ಲ್ಯಾಂಡ್ ಆಗಿದೆ ಇದಾದ ಸ್ವಲ್ಪ ಹೊತ್ತಲ್ಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದರು.
ಆದರೆ ಪ್ರಜ್ವಲ್ ರೇವಣ್ಣ ನೇರವಾಗಿ ಎಸ್ಐಟಿ ವಶಕ್ಕೆ ಸಿಗಲಿಲ್ಲ. ರಾಜತಾಂತ್ರಿಕ ಪಾಸ್ ಪೋರ್ಟ್ ಇದ್ದ ಕಾರಣ ಅವರನ್ನು ನೇರವಾಗಿ ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ. ಲೋಕಸಭಾ ಸ್ಪೀಕರ್ ಗೆ ಮನವಿ ಮಾಡಿದ ವಲಸೆ ಅಧಿಕಾರಿಗಳು ಅನುಮತಿ ಪಡೆದುಕೊಂಡಿದ್ದರು. ಅಂತೆಯ ಪ್ರಕರಣಕ್ಕೆ ಸಂಬಂಧಿಸಿದ 55 ಪುಟಗಳ ದಾಖಲೆಗಳನ್ನು ತಂದು ಎಸ್ಐಟಿ ಮುಖ್ಯಸ್ಥ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲರ ಮುಂದೆ ಸಹಿ ಹಾಕಲಾಯಿತು. ಅಲ್ಲಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್ ರೇವಣ್ಣ ವಿಮಾನದಿಂದಿಳಿದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪ್ರಕ್ರಿಯೆ ನಡೆಯಿತು.
ಇನ್ನೂ ಏರ್ಪೋರ್ಟ್ ಸುತ್ತ ಮುತ್ತ ಬಿಗಿ ಭದ್ರತೆ ವಹಿಸಲಾಗಿದೆ. ಬ್ಯಾರಿಕೇಡ್ ಹಾಕಿ ಭದ್ರತೆ ನೀಡಿದ್ದಾರೆ.
After sometimes people will forget everything.