May 2024

ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್| ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್ ಮಾಡಿದ್ದ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ. ಶಾಂಪುರ ನಿವಾಸಿ ಸಿಲಂಬರಸನ್ (21) ಬಂಧಿತ ಯುವಕ. ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಸಿಲಂಬರಸನ್ ಬೈಕ್‌ ರೈಡ್ ಮಾಡಿದ್ದ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿತ್ತು. […]

ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್| ಯುವಕ ಅರೆಸ್ಟ್ Read More »

ದಾಖಲೆಯ ಮೊತ್ತಕ್ಕೆ ಮಾರಾಟವಾದ ‘ಕಾಂತಾರ’ ಡಿಜಿಟಲ್ ರೈಟ್ಸ್

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕೇವಲ 15-16 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಾಂತಾರ ಚಿತ್ರದ ಡಿಜಿಟಲ್ ರೈಟ್ಸ್ 125 ಕೋಟಿ ರೂಪಾಯಿಗೆ ಅಮೆಜಾನ್ ಪ್ರೈಮ್ ವೀಡಿಯೋ ಕಂಪನಿಗೆ ಸೇಲ್ ಆಗಿ ಅಚ್ಚರಿ ನೀಡಿದೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಜೋಡಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಕಾಂತಾರ ಚಿತ್ರವು ಈ ಮೂಲಕ ಇದೀಗ ಮತ್ತೊಂದು ಮನ್ನಣೆಗೆ ಪಾತ್ರವಾಗಿದೆ. ಈಗಾಗಲೇ ಕಾಂತಾರ ಚಿತ್ರದ ಬಿಡುಗಡೆಯಿಂದ ಜಗತ್ತಿನಾದ್ಯಂತ 500 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಿದೆ. ರಿಷಬ್

ದಾಖಲೆಯ ಮೊತ್ತಕ್ಕೆ ಮಾರಾಟವಾದ ‘ಕಾಂತಾರ’ ಡಿಜಿಟಲ್ ರೈಟ್ಸ್ Read More »

ವಾಯುಭಾರ ಕುಸಿತ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಂಭವವಿದ್ದು, ಇದೇ 22ರವರೆಗೆ ಕರಾವಳಿಯುದ್ಧಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚಿಸಿದೆ. ಇದೇ 20ರಂದು ಮತ್ತು ಇದೇ 22ರಂದು ಕರಾವಳಿಯಲ್ಲಿ ಪ್ರತಿಕೂಲ ಹವಾಮಾನ ಇರಲಿದ್ದು, ಗಂಟೆಗೆ 45 ಕಿ.ಮೀ ಯಿಂದ 55 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದೆ. ಗಾಳಿಯು ಗಂಟೆಗೆ 65 ಕಿ.ಮೀ.

ವಾಯುಭಾರ ಕುಸಿತ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ಸೂಚನೆ Read More »

ನಿನ್ನೆ ಆರ್​ಸಿಬಿ-ಚೆನ್ನೈ ಪಂದ್ಯ: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ

ಸಮಗ್ರ ನ್ಯೂಸ್: ನಿನ್ನೆ ಚೆನ್ನೈ ಮತ್ತು ಆರ್​ಸಿಬಿ ಮ್ಯಾಚ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಜಯಗಳಿಸಿದೆ. ಇನ್ನೂ ಈ ಪಂದ್ಯ ಜಿಯೋ ಸಿನಿಮಾದಲ್ಲಿ 50 ಕೋಟಿ ವೀಕ್ಷಣೆ ಕಾಣುವ ಮೂಲಕ ದಾಖಲೆಯೊಂದನ್ನು ಬರೆದಿದೆ. ಐಪಿಎಲ್(IPL 2024)​ ಇತಿಹಾಸದಲ್ಲೇ ಡಿಜಿಟಲ್​ ವೀಕ್ಷಣೆಯಲ್ಲಿ ಅತ್ಯಧಿಕ ವೀಕ್ಷಣೆ ಕಂಡ ಪಂದ್ಯವೆಂಬ ದಾಖಲೆ ನಿರ್ಮಿಸಿದೆ. ನಿನ್ನೆ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218

ನಿನ್ನೆ ಆರ್​ಸಿಬಿ-ಚೆನ್ನೈ ಪಂದ್ಯ: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ Read More »

ತಾಯಿ ಶವದ ಜೊತೆ 4 ದಿನ ಕಳೆದ ಮಗಳ ದುರಂತ ಅಂತ್ಯ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲಿ ತಾಯಿ ಮೃತಪಟ್ಟರೆ ಇತ್ತ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ. ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತ ಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು. ಇದೇ ಸಂದರ್ಭದಲ್ಲಿ ಮನೆಯಿಂದ

ತಾಯಿ ಶವದ ಜೊತೆ 4 ದಿನ ಕಳೆದ ಮಗಳ ದುರಂತ ಅಂತ್ಯ Read More »

ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆ/ ನಿರ್ಮಾಣ ಕಾಮಗಾರಿಗಳಿಗೆ ಅಸ್ತು ಎಂದ ಚುನಾವಣಾ ಆಯೋಗ

ಸಮಗ್ರ ನ್ಯೂಸ್: ಚುನಾವಣಾ ನೀತಿ ಸಂಹಿತೆಯನ್ನು ರಾಜ್ಯದಲ್ಲಿ ಸಡಿಲಿಸಲಾಗಿದ್ದು, ಬರ ಪರಿಹಾರ ಪರಿಶೀಲನಾ ಸಭೆ ಮತ್ತು ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಂತಹ ಉದ್ದೇಶಗಳಿಗಾಗಿ ನಿಬರ್ಂಧಗಳನ್ನು ತೆಗೆದುಹಾಕಲು ಚುನಾವಣಾ ಆಯೋಗ ಅಸ್ತು ಎಂದಿದೆ. ಮೇ 8 ರಂದು ರಾಜ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯು ಸಲ್ಲಿಸಿದ ಮನವಿಯ ಆಧಾರದ ಮೇಲೆ ಚುನಾವಣಾ ಆಯೋಗವು ವಿವಿಧ ಉದ್ದೇಶಗಳಿಗಾಗಿ ನೀತಿ ಸಮಿತಿಯಿಂದ ವಿನಾಯಿತಿಗಳನ್ನು ನೀಡಿತು. ನಾಗರಿಕ ಕಾಮಗಾರಿಗಳು, ಮೂಲಸೌಕರ್ಯ ಕಾಮಗಾರಿಗಳು ಮತ್ತು ಸರಕು ಮತ್ತು ಸೇವೆಗಳ ಖರೀದಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಗೆ

ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆ/ ನಿರ್ಮಾಣ ಕಾಮಗಾರಿಗಳಿಗೆ ಅಸ್ತು ಎಂದ ಚುನಾವಣಾ ಆಯೋಗ Read More »

ಪ್ಲೇ ಆಫ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್/ ಶುಭ ಹಾರೈಸಿದ ವಿಜಯ್ ಮಲ್ಯ

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಜಿದ್ದಾಜಿದ್ದಿನಪಂದ್ಯದಲ್ಲಿ ಆರ್‍ಸಿಬಿ 27 ರನ್‍ಗಳಿಂದ ಚೆನ್ನೈ ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ. ಪ್ಲೇಆಫ್ ತಲುಪಿರುವ ಬೆಂಗಳೂರು ತಂಡವನ್ನು ಆರ್‍ಸಿಬಿಯ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ಅಭಿನಂದಿಸಿದ್ದಾರೆ. ಆರ್‍ಸಿಬಿ ಪ್ಲೇಆಫ್‍ಗೆ ಲಗ್ಗೆ ಇಟ್ಟಿರುವುದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಹೃದಯ ಪೂರ್ವಕ ಅಭಿನಂದನೆ ಹೇಳಲು ಬಯಸುತ್ತೇನೆ. ಸತತ ಸೋಲುಗಳ ನಂತರ ನೀವು ಎಷ್ಟು

ಪ್ಲೇ ಆಫ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್/ ಶುಭ ಹಾರೈಸಿದ ವಿಜಯ್ ಮಲ್ಯ Read More »

ನಾಳೆ ಐದನೇ ಹಂತದ ಲೋಕಸಭಾ ಚುನಾವಣೆ/ ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿ

ಸಮಗ್ರ ನ್ಯೂಸ್: ಮೇ 20 ರಂದು ಲೋಕಸಭೆಯ 5ನೇ ಹಂತದ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ 8 ರಾಜ್ಯಗಳ 49 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಶನಿವಾರಕ್ಕೆ ಅಂತ್ಯವಾಗಿದೆ. ಉತ್ತರ ಪ್ರದೇಶದ 14 ಕ್ಷೇತ್ರಗಳು, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7, ಬಿಹಾರದ 5, ಒಡಿಶಾದ 5, ಜಾಖರ್ಂಡ್ 3 ಹಾಗೂ ಲಡಾಖ್ ಹಾಗೂ ಜಮ್ಮ ಮತ್ತು ಕಾಶ್ಮೀರದಲ್ಲಿ ತಲಾ ಒಂದು ಕ್ಷೇತ್ರಗಳಿಗೆ

ನಾಳೆ ಐದನೇ ಹಂತದ ಲೋಕಸಭಾ ಚುನಾವಣೆ/ ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿ Read More »

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್

ಸಮಗ್ರ ನ್ಯೂಸ್: ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, ಠಾಣೆಯ PSI ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್ Read More »

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಸಮಗ್ರ ನ್ಯೂಸ್ : ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ ಹಾಕಿದರು. ಈ ಹಿಂದೆ ಹಲವು ಬಾರಿ ಪ್ರತಿಭಟನೆ ಹಾಗೂ ಮನವಿ ನೀಡಿದ ಬಳಿಕ ಸಾಸ್ತಾನ ಟೋಲ್ ಪ್ಲಾಝಾದಲ್ಲಿ ಸ್ಥಳೀಯರಿಗೆ ಕೆಲವು ವರ್ಷಗಳಿಂದ ಶುಲ್ಕ ವಿನಾಯತಿ ನೀಡಲಾಗುತ್ತಿತ್ತು. ಆದರೆ ಈಗ ನವಯುಗ ಕಂಪೆನಿ ಟೋಲ್ ಪ್ಲಾಜಾವನ್ನು ಹೊಸ ಕಂಪೆನಿಗೆ ಮಾರಾಟ ಮಾಡಿದ್ದು, ಆ ಬಳಿಕದಿಂದ ಸ್ಥಳೀಯ ವಾಹನಗಳಿಗೂ ಫಾಸ್ಟ್ಯಾಗ್ ಮೂಲಕ

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ Read More »