May 2024

ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ಕೊಹ್ಲಿ

ಸಮಗ್ರ ನ್ಯೂಸ್ : ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ. ಪಾಕ್ ಪರ್ವತಾರೋಹಿ ಶೆಹ್ರೋಜ್ ಕಾಶಿಫ್ ಅವರು ಟೀಂ ಇಂಡಿಯಾದ ಸ್ಫೋಟಕ ಆಟಗಾರ ಕೊಹ್ಲಿ ಅವರನ್ನು ವಿಡಿಯೋ ಕಾಲ್ನಲ್ಲಿ ಭೇಟಿಯಾದರು. ಇಬ್ಬರು ಸಂಭಾಷಣೆ ನಡೆಸಿದ್ದು, ಈ ವೇಳೆ ಕೊಹ್ಲಿ ‘ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ. ಈಗಾಗಲೇ ಎಲ್ಲೂ ಭೇಟಿ ನೀಡಲು ಪ್ರಾರಂಭಿಸಿದ್ದಾರೆ’ ಎಂದು ಹೇಳಿದ್ದಾರೆ. ಅದಕ್ಕೆ ಶೆಹ್ರೋಜ್ ಕಾಶಿಫ್ ನಿಮಗೆ ಸದಾ […]

ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ಕೊಹ್ಲಿ Read More »

ಬೀದರ್: ಅಕ್ರಮ ಎಣ್ಣೆ ಮಾರಾಟ: ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್ : ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಪಲ್ಟಿಯಾದ ಲಾರಿಯಿಂದ ಅಡುಗೆ ಎಣ್ಣೆ ಕಳವಾಗಿದೆ ಎಂದು ಸುಳ್ಳು ಹೇಳಿದ್ದ ಲಾರಿ ಚಾಲಕ ಪರಮೇಶ್ವರನನ್ನು ಪೊಲೀಸರು ಬಂಧಿಸಿದ್ದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಲಾರಿ ಮಾಲೀಕ ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು 19 ಲಕ್ಷ ರೂ. ಅಧಿಕ ಹಣ ಕೂಡಾ

ಬೀದರ್: ಅಕ್ರಮ ಎಣ್ಣೆ ಮಾರಾಟ: ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು Read More »

ಮಥುರಾ: ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಮಹಿಳೆ

ಸಮಗ್ರ ನ್ಯೂಸ್ : ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ರುಬಿನಾ ಎಂಬ ಮಹಿಳೆಯ ಪತಿ ತ್ರಿವಳಿ ತಲಾಖ್ ನೀಡಿದ್ದನು. ಇದರಿಂದ ನೊಂದಿದ್ದ ರುಬಿನಾ ತನ್ನ ಧರ್ಮ ಬದಲಿಸಿಕೊಂಡು ಹಿಂದೂ ಯುವಕನನ್ನೇ ಕೈ ಕೈ ಹಿಡಿದಿದ್ದಾಳೆ. ರುಬಿನಾ ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದಳು. ಆದರೆ ಪತಿಯ ಚಿತ್ರಹಿಂಸೆಯಿಂದ ಆಕೆ ಬೇಸತ್ತಿದ್ದಳು. ಕೊನೆಗೆ ಆತ ರುಬಿನಾಗೆ ತಲಾಖ್ ನೀಡಿದ್ದನು. ಆತನಿಂದ

ಮಥುರಾ: ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಮಹಿಳೆ Read More »

ಸಾರ್ವಜನಿಕರೇ ಎಚ್ಚರ/ ಹೆಚ್ಚುತ್ತಿದೆ ಡೆಂಘೀ ಜ್ವರ

ಸಮಗ್ರ ನ್ಯೂಸ್: ಮಳೆ ಆರಂಭವಾಗಿರುವ ಹಿನ್ನಲೆಯಲ್ಲಿ ಡೆಂಘೀ ಜ್ವರ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಪಾಸಿಟಿವಿಟಿ ದರ ಶೇ.21ಕ್ಕೆ ಏರಿಕೆಯಾಗಿದೆ. ಸಾವಿರಾರು ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರವೇ ಪ್ರಸಕ್ತ ಸಾಲಿನಲ್ಲಿ ಕಳೆದ ನಾಲ್ಕೂವರೆ ತಿಂಗಳಲ್ಲಿ ಒಟ್ಟು 2,877 ಮಂದಿಗೆ ಡೆಂಘೀ ಜ್ವರ ದೃಢಪಟ್ಟಿದೆ. ಕಳೆದ ವರ್ಷ ಈ ಅವಧಿಯಲ್ಲಿ ಕೇವಲ 1,724 ಪ್ರಕರಣ ವರದಿಯಾಗಿತ್ತು. ಕಳೆದ ಒಂದು ವಾರದಲ್ಲಿ 879 ಮಂದಿಗೆ

ಸಾರ್ವಜನಿಕರೇ ಎಚ್ಚರ/ ಹೆಚ್ಚುತ್ತಿದೆ ಡೆಂಘೀ ಜ್ವರ Read More »

ಪ್ರಧಾನಿ ಮೋದಿ ಪ್ರೆಸ್‌ಮೀಟ್ ಯಾಕೆ ಮಾಡಿಲ್ಲ? ಇಲ್ಲಿದೆ ಪಿಎಂ ನೀಡಿರುವ ಉತ್ತರ…

ಸಮಗ್ರ ನ್ಯೂಸ್: ಪತ್ರಿಕಾಗೋಷ್ಠಿಗಳನ್ನು ನಡೆಸದಿದ್ದಕ್ಕಾಗಿ ಟೀಕಾಕಾರರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುತ್ತಲೇ ಇದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಅವರೇ ಉತ್ತರಿಸಿದ್ದಾರೆ. ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಪಿಎಂ ಮೋದಿ, ಮಾಧ್ಯಮದ ಸ್ವರೂಪ ಬದಲಾಗಿದೆ ಮತ್ತು ಅದು ಮೊದಲಿನಂತೆ ತಟಸ್ಥವಾಗಿಲ್ಲ ಎಂದು ಹೇಳಿದ್ದಾರೆ. ಪತ್ರಕರ್ತರು ತಮ್ಮ ಆಲೋಚನೆಗಳು ಮತ್ತು ಸಿದ್ಧಾಂತಗಳನ್ನು ಪ್ರಚಾರ ಮಾಡುತ್ತಾರೆ. ನಾನು ಸಂಸತ್ತಿಗೆ ಉತ್ತರದಾಯಿಯಾಗಿದ್ದೇನೆ. ಇಂದು, ಪತ್ರಕರ್ತರನ್ನು ತಮ್ಮದೇ ಆದ ಆದ್ಯತೆಗಳಿಂದ ಗುರುತಿಸಲಾಗುತ್ತದೆ. ಮಾಧ್ಯಮಗಳು ಇನ್ನು ಮುಂದೆ ಪಕ್ಷಾತೀತ ಘಟಕವಾಗಿ ಉಳಿದಿಲ್ಲ ಅಂಥ ಅವರು ಹೇಳಿದ್ದಾರೆ. ಆಜ್

ಪ್ರಧಾನಿ ಮೋದಿ ಪ್ರೆಸ್‌ಮೀಟ್ ಯಾಕೆ ಮಾಡಿಲ್ಲ? ಇಲ್ಲಿದೆ ಪಿಎಂ ನೀಡಿರುವ ಉತ್ತರ… Read More »

ಸಾರಿಗೆ ನೌಕರರಿಗೆ ಗುಡ್ ನ್ಯೂಸ್| ಚುನಾವಣೆ ಬಳಿಕ ವೇತನ ಪರಿಷ್ಕರಣೆಗೆ ಚಿಂತನೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ 4 ವರ್ಷಗಳಿಗೊಮ್ಮೆ ನಡೆಯುವ ಸಾರಿಗೆ ನೌಕರರ ವೇತನ ಪರಿಷ್ಕರಣೆ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಬಾರಿಯೂ ಶೇ. 12ರಿಂದ 15ರಷ್ಟು ವೇತನ ಹೆಚ್ಚಳ ಮಾಡುವ ಸಂಬಂಧ ಚಿಂತನೆ ನಡೆದಿದೆ. ಕಳೆದ ಬಾರಿ ಅಂದರೆ 2023ರಲ್ಲಿ ಸರಕಾರ ಅಳೆದು-ತೂಗಿ ಶೇ.15ರಷ್ಟು ವೇತನ ಪರಿಷ್ಕರಣೆ ಮಾಡಿತ್ತು. ಇದು 2020ರ ಜ. 1ರಿಂದ ಪೂರ್ವಾನ್ವಯ ಆಗುವಂತೆ ಆದೇಶ ಹೊರಡಿಸಲಾಗಿತ್ತು. ಇದರಲ್ಲಿ 38 ತಿಂಗಳ ವೇತನ ಪರಿಷ್ಕರಣೆಯ ಬಾಕಿ ಇನ್ನೂ ಪಾವತಿ ಮಾಡಬೇಕಿದೆ. ಅಷ್ಟರಲ್ಲಿ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್| ಚುನಾವಣೆ ಬಳಿಕ ವೇತನ ಪರಿಷ್ಕರಣೆಗೆ ಚಿಂತನೆ Read More »

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್| ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಪರಿಣಾಮ, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದ ಕಾಫಿ ತೋಟದಲ್ಲಿ ದುರ್ಘಟನೆ ನಡೆದಿದೆ. ಕೆರೆಮಕ್ಕಿ ಗ್ರಾಮದ ಸಂಜು (33) ಸಾವಿಗೀಡಾದ ಯುವಕ. ಕಾಫಿ ತೋಟದ ಅಂಚಿನಲ್ಲಿರುವ ಕಾಡಿಗೆ ಅಕ್ರಮವಾಗಿ ಪ್ರಾಣಿ ಬೇಟೆಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಇದೇ ಥರ ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಅಪರಾಧದ ಆಯಾಮಗಳ ಕುರಿತು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್| ಸಾವಿನ ಸುತ್ತ ಅನುಮಾನದ ಹುತ್ತ Read More »

ಮೋದಿಯನ್ನು ಹೊಗಳಿದ ರಶ್ಮಿಕಾ/ ಗರಂ ಆದ‌ ಚೇತನ್

ಸಮಗ್ರ ನ್ಯೂಸ್: ನಟಿ ರಶ್ಮಿಕಾ ಮಂದಣ್ಣ, ಕಳೆದ ಹತ್ತು ವರ್ಷಗಳಲ್ಲಿ ಭಾರತ ಅದ್ಭುತವಾಗಿ ಅಭಿವೃದ್ಧಿ ಹೊಂದಿದೆ ಎಂದು ಮೋದಿಯವರನ್ನು ಹೊಗಳಿದ್ದಕ್ಕೆ ನಟ ಚೇತನ್ ಗರಂ ಆಗಿದ್ದಾರೆ. ಅಟಲ್ ಸೇತು ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ಕುರಿತು ರಶ್ಮಿಕಾ ಹೆಮ್ಮೆ ವ್ಯಕ್ತಪಡಿಸಿದ್ದರು. ರಶ್ಮಿಕಾ ಹೇಳಿಕೆಯನ್ನು ಟೀಕೆ ಮಾಡಿರುವ ಚೇತನ್, ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆದಾಯ ಅಸಮಾನತೆ ಗಗನಕ್ಕೇರಿದೆ ಮತ್ತು ಪ್ರಜಾಪ್ರಭುತ್ವದ ಸ್ವಾತಂತ್ರ್ಯಗಳು ದಾಳಿಗೆ ಒಳಗಾಗಿವೆ. ಯಾವುದೇ ಮೂರ್ಖ ಪಕ್ಷವು ಕಾಂಕ್ರೀಟ್ ಸುರಿಯಬಹುದು ಮತ್ತು ಮೂಲಸೌಕರ್ಯಗಳನ್ನು ನಿರ್ಮಿಸಬಹುದು. ಸಮಾಜವನ್ನು

ಮೋದಿಯನ್ನು ಹೊಗಳಿದ ರಶ್ಮಿಕಾ/ ಗರಂ ಆದ‌ ಚೇತನ್ Read More »

ಕಾವೇರಿ ನೀರು ಬಿಡಲು ಅಸಾಧ್ಯ/ ಸ್ಪಷ್ಟಪಡಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ

ಸಮಗ್ರ ನ್ಯೂಸ್: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರದ ನೀರಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ತಿರಸ್ಕರಿಸಿದೆ. 2023-24 ಜಲವರ್ಷದ ಅಂತಿಮ ಸಭೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ, ಕರ್ನಾಟಕದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ. ಅಚ್ಚುಕಟ್ಟಾದ ಪ್ರದೇಶದಲ್ಲಿ ನೈಸರ್ಗಿಕವಾಗಿ ಸಮುದ್ರ ಸೇರುವ ನೀರನ್ನು ಬಳಸಿಕೊಳ್ಳಿ ಎಂದು ತಮಿಳುನಾಡಿಗೆ ಸೂಚಿಸಲಾಗಿದೆ.

ಕಾವೇರಿ ನೀರು ಬಿಡಲು ಅಸಾಧ್ಯ/ ಸ್ಪಷ್ಟಪಡಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ Read More »

ಮಡಿಕೇರಿ: ಮೇ. 17 ರಂದು ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್ : ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ.17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೆಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೇ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಮಡಿಕೇರಿ: ಮೇ. 17 ರಂದು ವಿದ್ಯುತ್ ವ್ಯತ್ಯಯ Read More »