May 2024

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ‌ ಕಾರೊಂದು ಚರಂಡಿಗಿಳಿದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ಮೇ.17ರಂದು ನಡೆದಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಪರಿಣಾಮ ರಸ್ತೆ ಪಕ್ಕದ ಚರಂಡಿಗಿಳಿದು ಜಖಂಗೊಂಡಿದೆ. ಚಾಲಕ ಮಾತ್ರ ಇದ್ದು, ಅಪಾಯದಿಂದ ಪಾರಾಗಿದ್ದಾನೆ.

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು Read More »

ಕೋವಿಶೀಲ್ಡ್ ಬಳಿಕ ಕೋವ್ಯಾಕ್ಸಿನ್ ನಲ್ಲೂ ಅಡ್ಡ ಪರಿಣಾಮ| ಬಯಲಾಯ್ತು ಕಳವಳಕಾರಿ ಸಂಗತಿ

ಸಮಗ್ರ ನ್ಯೂಸ್: ಬ್ರಿಟನ್ ಮೂಲದ ಅಸ್ಟ್ರಾಜೆನಿಕಾ ಕಂಪನಿ ತಯಾರಿಸಿದ ಮತ್ತು ಭಾರತದಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ಮಾರಾಟ ಮಾಡಿದ ಕೋವಿಶೀಲ್ಡ್ ಲಸಿಕೆಯಲ್ಲಿ ಅಪರೂಪದ ಅಡ್ಡ ಪರಿಣಾಮ ಇರುವುದನ್ನು ಸ್ವತಃ ಕಂಪನಿಯೇ ಒಪ್ಪಿಕೊಂಡಿದೆ. ಈಗ ಸ್ವದೇಶಿ ಕೋವಿಡ್ ಲಸಿಕೆ ಎಂದೇ ಜನಪ್ರಿಯವಾಗಿದ್ದ ಕೋವ್ಯಾಕ್ಸಿನ್ ಲಸಕೆಯಿಂದಲೂ ಅಡ್ಡ ಪರಿಣಾಮಗಳು ಉಂಟಾದ ಕಳವಳಕಾರಿ ಸಂಗತಿ ಅಧ್ಯಯನದಲ್ಲಿ ಬಳಕೆಗೆ ಬಂದಿದೆ. ಬನಾರಸ್ ವಿವಿ ಅಧ್ಯಯನದಲ್ಲಿ ಅಡ್ಡ ಪರಿಣಾಮ ಉಂಟಾಗಿರುವುದು ಬೆಳಕಿಗೆ ಬಂದಿದ್ದು, ಕೋವಿಶೀಲ್ಡ್ ನಂತರ ಸ್ವದೇಶಿ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮ ಉಂಟಾಗಿರುವುದು ಗೊತ್ತಾಗಿದೆ.

ಕೋವಿಶೀಲ್ಡ್ ಬಳಿಕ ಕೋವ್ಯಾಕ್ಸಿನ್ ನಲ್ಲೂ ಅಡ್ಡ ಪರಿಣಾಮ| ಬಯಲಾಯ್ತು ಕಳವಳಕಾರಿ ಸಂಗತಿ Read More »

ಬೆಂಗಳೂರಿನಲ್ಲಿ ಯುವತಿ ಅನುಮಾನಾಸ್ಪದ ಸಾವು: ಕೊಲೆ ಮಾಡಿದ್ದಾರೆಂದು ತಾಯಿ ಆರೋಪ

ಸಮಗ್ರ ನ್ಯೂಸ್: ಹುಬ್ಬಳ್ಳಿ, ಕೊಡಗುವಿನಲ್ಲಿ ನಡೆದ ಯುವತಿಯರ ಹತ್ಯೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ನಡೆದಿದೆ. 21 ವರ್ಷದ ಯುವತಿಯ ಮೃತದೇಹ ಮನೆಯ ಬಾತ್ ರೂಂನಲ್ಲಿ ಇದೀಗ ಪತ್ತೆಯಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯ ಬಾತ್ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾಳ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು,

ಬೆಂಗಳೂರಿನಲ್ಲಿ ಯುವತಿ ಅನುಮಾನಾಸ್ಪದ ಸಾವು: ಕೊಲೆ ಮಾಡಿದ್ದಾರೆಂದು ತಾಯಿ ಆರೋಪ Read More »

ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ರಾರಾಜಿಸಲಿದೆ ಕನ್ನಡಿಗರ ಹೆಮ್ಮೆಯ ‘ನಂದಿನಿ’

ಸಮಗ್ರ ನ್ಯೂಸ್: ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಕನ್ನಡಿಗರ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಲಾಂಛನ ಐಲೆರ್ಂಡ್ ಮತ್ತು ಸ್ಕಾಟ್ಲೆಂಡ್ ಆಟಗಾರರ ಜೆರ್ಸಿಯ ಮೇಲೆ ರಾರಾಜಿಸಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ತಿಳಿಸಿದರು. ಜೂ.1ರಿಂದ 29ರವರೆಗೆ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯು ಅಮೆರಿಕ, ವೆಸ್ಟ್‍ಇಂಡೀಸ್‍ನಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ಕೆಎಂಎಫ್ ಐಲೆರ್ಂಡ್ ಮತ್ತು ಸ್ಕಾಟ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲಿದೆ. ಈ ತಂಡಗಳ ಆಟಗಾರರ ಜೆರ್ಸಿಯಲ್ಲಿ ಬಲಗೈ ಆಟಗಾರನ ಎಡ ತೋಳಿನ ಮೇಲೆ ಮತ್ತು ಎಡಗೈ

ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ರಾರಾಜಿಸಲಿದೆ ಕನ್ನಡಿಗರ ಹೆಮ್ಮೆಯ ‘ನಂದಿನಿ’ Read More »

ಉಳ್ಳಾಲ: ಸ್ಕೂಟರ್ ಡಿಕ್ಕಿ : ಸಹ ಸವಾರ ಮೃತ್ಯು

ಸಮಗ್ರ ನ್ಯೂಸ್ : ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರ್ಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿ ಅಹಮ್ಮದ್ ನಿಷಾಧ್ (22)ಮೃತ ಯುವಕ. ನಿಷಾಧ್ ಇಂದು ಮುಂಜಾನೆ ನಾಲ್ಕು ಗಂಟೆಯ ವೇಳೆ ಸಯ್ಯದ್ ಹಫೀಝ್ ಎಂಬವರೊಂದಿಗೆ ಸ್ಕೂಟರಲ್ಲಿ ಸಹಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ ಬಂದು

ಉಳ್ಳಾಲ: ಸ್ಕೂಟರ್ ಡಿಕ್ಕಿ : ಸಹ ಸವಾರ ಮೃತ್ಯು Read More »

ಹವಾಮಾನ ವರದಿ| ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ| ಮೇ.18 ಮತ್ತು 19ರಂದು ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಹವಾಮಾನ ವರದಿ| ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ| ಮೇ.18 ಮತ್ತು 19ರಂದು ಭಾರೀ ಮಳೆ ಸಾಧ್ಯತೆ Read More »

ಪುಣೆ: ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಕೊಟ್ಟ ಜೊಮ್ಯಾಟೊ

ಸಮಗ್ರ ನ್ಯೂಸ್ : ಜೊಮ್ಯಾಟೊದಿಂದ ಆರ್ಡರ್ ಮಾಡಿದ ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಕರವೇನಗರದ ನಿವಾಸಿ ಪಂಕಜ್ ಶುಕ್ಲಾ ಎಂಬ ವ್ಯಕ್ತಿ ಎಕ್ಸ್ನಲ್ಲಿ ವಿಡಿಯೋ ಸಮೇತ ಪೋಸ್ಟ್ವೊಂದನ್ನು ಮಾಡಿದ್ದು, ಇದೀಗ ಈ ವಿಚಾರ ಎಲ್ಲೆಡೆ ವೈರಲ್ ಆಗುತ್ತಿದೆ. ಜೊಮ್ಯಾಟೊದಲ್ಲಿ ಪಿಕೆ ಬಿರಿಯಾನಿ ಹೌಸ್ನಿಂದ ಪನೀರ್ ಬಿರಿಯಾನಿ ಆರ್ಡರ್ ಮಾಡಿದ್ದರು. ಆರ್ಡರ್ ಬಂದಂತೆ ಅದನ್ನು ತೆರೆದು ನೋಡಿದಾಗ ಅದರಲ್ಲಿ ಪನೀರ್ ಜೊತೆಗೆ ಚಿಕನ್ ಪೀಸ್ಗಳೂ ಮಿಕ್ಸ್ ಆಗಿದ್ದು ಕಂಡು ಬಂದಿದೆ. ತಕ್ಷಣ

ಪುಣೆ: ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಕೊಟ್ಟ ಜೊಮ್ಯಾಟೊ Read More »

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ಸಮಗ್ರ ನ್ಯೂಸ್: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲಾಗಿ, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಈಜಲು ತೆರಳಿದ್ದ ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಇವರೆಲ್ಲ ಮುತ್ತಿಗೆ ಗ್ರಾಮದವರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ. ಇತ್ತ ಬದುಕುಳಿದ ಓರ್ವ

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು Read More »

ಮೈಸೂರು: ನಮಗೆ ಒಂದು ತೊಟ್ಟು ವಿಷ ಕೊಟ್ಟು ಬಿಡಿ ಎಂದು ಗ್ರಾಮ ತೊರೆಯಲು ಮುಂದಾದ ಗ್ರಾಮಸ್ಥರು

ಸಮಗ್ರ ನ್ಯೂಸ್ : ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತದೆ. ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ. ನಮ್ಮ ಸಮಸ್ಯೆಯನ್ನು ಬಗೆಹರಿಸಿ ಇಲ್ಲದಿದ್ದರೆ ನಮಗೆ ಒಂದು ತೊಟ್ಟು ವಿಷ ಕೊಟ್ಟು ಬಿಡಿ ಎಂದು ಗ್ರಾಮಸ್ಥರು ಗ್ರಾಮವನ್ನು ತೊರೆಯಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದ ಹೊಸ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ನಿವಾಸಿಗಳು ಪರಿತಪಿಸುತ್ತಿದ್ದಾರೆ. ಶಾಸಕ ದರ್ಶನ್

ಮೈಸೂರು: ನಮಗೆ ಒಂದು ತೊಟ್ಟು ವಿಷ ಕೊಟ್ಟು ಬಿಡಿ ಎಂದು ಗ್ರಾಮ ತೊರೆಯಲು ಮುಂದಾದ ಗ್ರಾಮಸ್ಥರು Read More »

ವಿಜಯಪುರ : ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದ ಪಾಪಿ ತಾಯಿ

ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆ ಮೃತಪಟ್ಟ ನವಜಾತ ಶಿಶುವನ್ನು ಪ್ಲಾಸ್ಟಿಲ್ ಹಾಳೆಯಲ್ಲಿ ಸುತ್ತಿ ಚರಂಡಿಗೆ ಎಸೆದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾಳೆ. ಶಿಶುವನ್ನು ಗಮನಿಸಿದ ಗ್ರಾಮಸ್ಥರು ಚರಂಡಿಯಿಂದ ಗಂಡು ಮಗುವನ್ನು ಮೇಲಕ್ಕೆತ್ತಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಮುದ್ದೇಬಿಹಾಳ ಪೊಲೀಸರು ತಾಯಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ವಿಜಯಪುರ : ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದ ಪಾಪಿ ತಾಯಿ Read More »