ಮಡಿಕೇರಿ : ಮೇ.16 ರಂದು ವಿದ್ಯುತ್ ವ್ಯತ್ಯಯ
ಸಮಗ್ರ ನ್ಯೂಸ್: ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮೇ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಶಾಂತಳ್ಳಿ, ಗೌಡಳ್ಳಿ, ಸೋಮವಾರಪೇಟೆ ಪಟ್ಟಣ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ : ಮೇ.16 ರಂದು ವಿದ್ಯುತ್ ವ್ಯತ್ಯಯ Read More »