ನೇಹಾ ಮಾದರಿಯಲ್ಲೇ ಮತ್ತೊಂದು ಹತ್ಯೆ| ಮತ್ತೆ ಬೆಚ್ಚಿಬಿದ್ದ ಹುಬ್ಬಳ್ಳಿ| ಆರೋಪಿ ಬಂಧನಕ್ಕೆ ಕಾರ್ಯಾಚರಣೆ ಶುರು
ಸಮಗ್ರ ವಾರ್ತೆ: ದೇಶವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಬುಧವಾರ (ಮೇ 15) ನಡೆದಿದೆ. ಕೊಲೆಯಾದ ಯುವತಿಯನ್ನು ಅಂಜಲಿ ಅಂಬಿಗೇರ (20) ಎಂದು ಗುರುತಿಸಲಾಗಿದ್ದು, ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತಲೆಮಾರಿಸಿಕೊಂಡಿದ್ದಾನೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿ ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ […]