May 2024

ಕಲ್ಲಡ್ಕ : ಭಾರೀ ಗಾಳಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಮಗ್ರ ನ್ಯೂಸ್‌ : ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಕಾರು ಚಾಲಕ ತೌಶೀಫ್ ಎಂಬಾತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ತೌಶೀಫ್ ಕಾರಿನಲ್ಲಿ ಒಬ್ಬನೇ ಇದ್ದು ಮಾಣಿ ಕಡೆಯಿಂದ ಮಂಗಳೂರಿಗೆ ತೆರಳುವ ವೇಳೆ ಘಟನೆ ನಡೆದಿದೆ. ಸಂಜೆ ಜೋರಾಗಿ ಸುರಿದ ಮಳೆಗೆ ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮವಾಗಿ ನಿಯಂತ್ರಣ ಕಳೆದು ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಸರಿಯಾಗಿ […]

ಕಲ್ಲಡ್ಕ : ಭಾರೀ ಗಾಳಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಮೈಸೂರು : ನೀರಿನಲ್ಲಿ ಮುಳುಗಿ ಯುವತಿ ಮೃತ್ಯು

ಸಮಗ್ರ ನ್ಯೂಸ್‌ : ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟಿ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ. ಮೆಹನಾಜ್ (17) ಮೃತ ದುರ್ದೈವಿ.ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್‌ ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಈಜು ಬಾರದೆ ಇದ್ದರೂ, ನೀರಿನಲ್ಲಿ ಆಟವಾಡುಲು ನದಿಗೆ ಇಳಿದಿದ್ದಾಳೆ. ಆದರೆ ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ

ಮೈಸೂರು : ನೀರಿನಲ್ಲಿ ಮುಳುಗಿ ಯುವತಿ ಮೃತ್ಯು Read More »

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ಸಮಗ್ರ ನ್ಯೂಸ್ : ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ. ಶಾಸಕರು ಕಛೇರಿಯಲ್ಲಿ ನೀರು ಪೂರೈಕೆ ಅಧಿಕಾರಿಗಳ ಸಭೆ ಕರೆದಿದ್ದು, ಅಧಿಕಾರಿಗಳಿಂದ ಸಭೆಗೆ ತಡೆ ನೀಡಲಾಗಿದೆ.ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಅಧಿಕಾರಿಗಳು ಸೂಚನೆ ನೀಡಿದರು. ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ ಎಂದು ಲೋಕಸಭಾ ಚುನಾವಣೆ, ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆಯ ವೇಳೆ ಶಾಸಕರು ಸಭೆಯನ್ನು ಕರೆದಿದ್ದು, ಜನರ ಸಮಸ್ಯೆಯನ್ನು

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ Read More »

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಸ್ತೆ: ಸಂಚಾರ ಅಸ್ತವ್ಯಸ್ತ

ಸಮಗ್ರ ನ್ಯೂಸ್‌ : ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ. ಹೆದ್ದಾರಿ ಕಾಮಗಾರಿ ಹಾಗೂ ಪ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಕಲ್ಲಡ್ಕದಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ನೀರು ಹರಿದು ಹೋಗುವ ಚರಂಡಿ ವ್ಯವಸ್ಥೆ ಸರಿಯಾಗದೆ ಇದ್ದ ಪರಿಣಾಮ ರಸ್ತೆ ತುಂಬಾ‌ ಕೆಸರು ತುಂಬಿಕೊಂಡಿದೆ. ಅಲ್ಲಲ್ಲಿ ಉಂಟಾದ ಗುಂಡಿಯಿಂದ ವಾಹನಗಳು ಸರಾಗವಾಗಿ ಚಲಿಸಲು ಸಾಧ್ಯವಾಗುತ್ತಿಲ್ಲ. ಮೇ.13 ರಂದು ಬೆಳಿಗ್ಗೆಯಿಂದಲೇ ಕುದ್ರೆಬೆಟ್ಟುವಿನಿಂದ ನರಹರಿ ವರೆಗೂ ಟ್ರಾಫಿಕ್ ಜಾಮ್

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಸ್ತೆ: ಸಂಚಾರ ಅಸ್ತವ್ಯಸ್ತ Read More »

ಕೆನಡಾ: ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌

ಸಮಗ್ರ ನ್ಯೂಸ್‌ : ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಇದೊಂದು ಅತಿ ದೊಡ್ಡ ದರೋಡೆ ಪ್ರಕರಣವಾಗಿದ್ದು, ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದೆ. ಬಂಧಿತನನ್ನು ಅರ್ಚಿತ್‌ ಗ್ರೋವರ್‌ ಎಂದು ಗುರುತಿಸಲಾಗಿದ್ದು, ಈತನ ಬಂಧನಕ್ಕಾಗಿ ಕೆನಡಾದಾದ್ಯಂತ ವಾರೆಂಟ್‌ ಜಾರಿಗೊಳಿಸಲಾಗಿತ್ತು. ಗ್ರೋವರ್‌ ವಿರುದ್ಧ 5,000ಡಾಲರ್‌ ಕಳ್ಳತನ ಮತ್ತು ದರೋಡೆಗೆ ಸಂಚು ರೂಪಿಸಿದ ಪ್ರಕರಣ ದಾಖಲಾಗಿದೆ. ಅಲ್ಲದೇ ಅಮೆರಿಕದ

ಕೆನಡಾ: ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌ Read More »

ಮೈಸೂರು: ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ. ಕರ್ಣ (19) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪತ್ರಿಕಾ ವಿತರಕನಾಗಿ ಕರ್ಣ ಕೆಲಸ ಮಾಡುತ್ತಿದ್ದನು. ಸೂಕ್ತ ಕೆಲಸವಿಲ್ಲದೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೈಸೂರು: ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ Read More »

Health Tips; ಸನ್ ಟ್ಯಾನ್ ಆಗಿದೆಯೇ? ಮನೆಯಲ್ಲೇ ಮಾಡ್ಕೊಳ್ಳಿ ಸರಳ ಪರಿಹಾರ

ಸಮಗ್ರ ನ್ಯೂಸ್: ಸನ್ ಟ್ಯಾನ್ ನಿಭಾಯಿಸಲು ಹಲವು ಫೇಶಿಯಲ್ ಗಳು ಮತ್ತು ಇತರ ಕಾರ್ಯ ವಿಧಾನಗಳು ಇವೆ. ಆದರೆ ಮನೆ ಪರಿಹಾರವನ್ನು ಪಡೆಯುವುದಕ್ಕಿಂತ ಇವು ಉತ್ತಮವಲ್ಲ. ಮನೆ ಪರಿಹಾರಗಳು ಚರ್ಮಕ್ಕೆ ಪೋಷಣೆ ಒದಗಿಸುತ್ತದೆ. ಜೊತೆಗೆ ಆರೋಗ್ಯಕರ ವರ್ಧಕವನ್ನು ನೀಡುತ್ತದೆ. ಮೊಸರು ಮತ್ತು ಟೊಮೆಟೊ ಪ್ಯಾಕ್:2 ಚಮಚ ಟೊಮೆಟೊ ತಿರುಳು, 1 ಚಮಚ ನಿಂಬೆರಸ ಮತ್ತು 1 ಚಮಚ ಮೊಸರು ಸೇರಿಸಿ ಮಿಶ್ರಣ ಮಾಡಿಕೊಳ್ಳಬೇಕು. ಪ್ಯಾಕನ್ನು ಮುಖ ಮತ್ತು ಕೈಗಳಿಗೆ ಹಚ್ಚಿ 30 ನಿಮಿಷಗಳ ಬಳಿಕ ತೊಳೆಯಬೇಕು. ಹಾಲು

Health Tips; ಸನ್ ಟ್ಯಾನ್ ಆಗಿದೆಯೇ? ಮನೆಯಲ್ಲೇ ಮಾಡ್ಕೊಳ್ಳಿ ಸರಳ ಪರಿಹಾರ Read More »

ಸಂಪಾದಕೀಯ; ನೇಹಾ, ಮೀನಾ ಇಬ್ಬರೂ ನಮ್ಮನೆ ಮಕ್ಳೇ…

ಸಮಗ್ರ ನ್ಯೂಸ್: ಅತ್ತ ಕೊಡಗಿನಿಂದ ಬರ್ಬರ ಕೃತ್ಯವೊಂದು ನಾಡನ್ನು ಬೆಚ್ಚಿ ಬೇಳಿಸಿತು. ಎಸೆಸೆಲ್ಸಿಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಳಾದ ಸಂಭ್ರಮದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ದುಷ್ಕರ್ಮಿಯೊಬ್ಬ ಅತ್ಯಂತ ಭೀಕರವಾಗಿ ಕೊಲೆ ಮಾಡಿದ್ದ. ಕೊಡಗಿನ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯ ಕುಂಬಾರ ಗಡಿಗೆ ಎಂಬಲ್ಲಿ ಈ ಕೃತ್ಯ ನಡೆದಿತ್ತು. ಕೊಲೆಯ ಭೀಕರತೆಯೇ, ಆರೋಪಿ ಸೈಕೋಪಾತ್ ಎನ್ನುವುದನ್ನು ಹೇಳುತ್ತಿತ್ತು. ಬಂಧಿತ ಆರೋಪಿ ಪ್ರಕಾಶ್, ವಿದ್ಯಾರ್ಥಿನಿಯ ತಲೆ ಕತ್ತರಿಸಿ ಕೊಲೆ ಮಾಡಿದ್ದಾನೆ. ಸಂತ್ರಸ್ತೆಯ ರುಂಡವನ್ನು ಆಕೆಯ ನಿವಾಸದಿಂದ ಸುಮಾರು 100 ಮೀಟರ್ ದೂರದ ಕಾಡಿನ ನಡುವೆ ಪತ್ತೆ

ಸಂಪಾದಕೀಯ; ನೇಹಾ, ಮೀನಾ ಇಬ್ಬರೂ ನಮ್ಮನೆ ಮಕ್ಳೇ… Read More »

‘ಸೀತಾರಾಮ’ ಧಾರಾವಾಹಿ ನಟಿ ವೈಷ್ಣವಿಗೆ ದಂಡ ವಿಧಿಸಿದ ಪೊಲೀಸರು|

ಸಮಗ್ರ ನ್ಯೂಸ್: ಜೀ ಕನ್ನಡದ ‘ಸೀತಾರಾಮ’ ಧಾರಾವಾಹಿ ಶೂಟಿಂಗ್ ವೇಳೆ ನಟಿ ವೈಷ್ಣವಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ದೃಶ್ಯ ವೀಕ್ಷಿಸಿದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸ್ ಇಲಾಖೆ, ಆ ಧಾರಾವಾಹಿಯ ನಿರ್ದೇಶಕರಿಗೆ ಹಾಗೂ ವೈಷ್ಣವಿ ಅವರಿಗೆ ದಂಡ ವಿಧಿಸಿದೆ. ‘ಸೀತಾರಾಮ’ ಎಂಬ ಧಾರಾವಾಹಿಯ 14ನೇ ಎಪಿಸೋಡ್‌ನಲ್ಲಿ ದ್ವಿಚಕ್ರ ವಾಹನದ ಹಿಂಬದಿ ಸವಾರೆ ಹೆಲ್ಮೆಟ್‌ ಇಲ್ಲದೆ ಪ್ರಯಾಣಿಸುತ್ತಿದ್ದ ದೃಶ್ಯ ಪ್ರಸಾರವಾಗಿದೆ ಎಂದು ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಜಯಪ್ರಕಾಶ್‌ ಎಕ್ಕೂರು ಅವರು 2023 ಆಗಸ್ಟ್

‘ಸೀತಾರಾಮ’ ಧಾರಾವಾಹಿ ನಟಿ ವೈಷ್ಣವಿಗೆ ದಂಡ ವಿಧಿಸಿದ ಪೊಲೀಸರು| Read More »

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ಹುಸಿ ಬಾಂಬ್ ಕರೆ

ಸಮಗ್ರ ನ್ಯೂಸ್: ದೆಹಲಿಯ ವಿಮಾನ ನಿಲ್ದಾಣ ಹಾಗೂ ಹಲವು ಆಸ್ಪತ್ರೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌ ಸಂದೇಶ ಬಂದಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಭಾನುವಾರ ನಡೆದಿದೆ. ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆ‌ಯಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಇಲಾಖೆಯ ಸಿಟಿ ಎಸ್.ಬಿ.ಗೆ ಇ-ಮೇಲ್ ಬಂದಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗೋವಿಂದ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೇಂಟ್ ಫಿಲೋಮಿನಾ

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ಹುಸಿ ಬಾಂಬ್ ಕರೆ Read More »