May 2024

ಕಿರುತೆರೆ ನಟಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಕನ್ನಡ ಮತ್ತು ತೆಲುಗು ಧಾರವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ. ಇವರು ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇವರು ಹೆಚ್ಚು ಫೇಮಸ್‌ ಆದದ್ದು ತೆಲುಗಿನ […]

ಕಿರುತೆರೆ ನಟಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವು Read More »

ಕಡಬ: ಕುಮಾರಧಾರ ಒಡಲಲ್ಲಿ ಅಕ್ರಮ ಮರಳುಗಾರಿಕೆ| ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಸೇರಿ‌ ಇಬ್ಬರ ಮೇಲೆ ಎಫ್ಐಆರ್| ಉದ್ದೇಶ ಪೂರ್ವಕ ಕೇಸು ದಾಖಲು ಎಂದ ಮರಳು ವ್ಯಾಪಾರಸ್ಥರ ಸಂಘ

ಸಮಗ್ರ ನ್ಯೂಸ್: ಕುಮಾರಧಾರ ನದಿಯಲ್ಲಿ ಮರಳು ಕಳ್ಳತನ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮೇ 7 ರಂದು ಬೇಧಿಸಿದ್ದಾರೆ. ಜಿಲ್ಲೆಯ ಪ್ರತಿಷ್ಟಿತ ಜನ ಪ್ರತಿನಿಧಿಯೊಬ್ಬರ ಕೃಪಕಟಾಕ್ಷದಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರ ನೇತೃತ್ವದಲ್ಲಿ ಕಡಬದ ಕುದ್ಮಾರಿನಲ್ಲಿ ಈ ಬೃಹತ್ ಮರಳು ದಂಧೆ ಕಳೆದ ಹಲವಾರು ಸಮಯದಿಂದ ಎಗ್ಗಿಲ್ಲದೆ ನಡೆಯುತಿತ್ತು. ಈ ಬಗ್ಗೆ ಹಲವು ಬಾರಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪುತ್ತೂರು ಎಪಿಎಂಸಿಯ ಮಾಜಿ ಅಧ್ಯಕ್ಷ ಜಿಲ್ಲೆಯ ಪ್ರಭಾವಿ ಬಿಜೆಪಿ

ಕಡಬ: ಕುಮಾರಧಾರ ಒಡಲಲ್ಲಿ ಅಕ್ರಮ ಮರಳುಗಾರಿಕೆ| ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಸೇರಿ‌ ಇಬ್ಬರ ಮೇಲೆ ಎಫ್ಐಆರ್| ಉದ್ದೇಶ ಪೂರ್ವಕ ಕೇಸು ದಾಖಲು ಎಂದ ಮರಳು ವ್ಯಾಪಾರಸ್ಥರ ಸಂಘ Read More »

ದ್ವಾದಶ ರಾಶಿಗಳ ವಾರ‌ಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ಮೇ​ 12 ರಿಂದ 18ರವರೆಗೆ ಯಾವ ರಾಶಿಯವರಿಗೆ ಯಾವ ಫಲ ಇದೆ? ಶುಭ-ಅಶುಭ ಇದೆಯಾ? ಎಂಬಿದ್ಯಾತಿ ಮಾಹಿತಿಯನ್ನು ತಿಳಿದುಕೊಳ್ಳೋಣ… ಮೇಷ ರಾಶಿ :ಈ ವಾರ ನಿಮಗೆ ಸಂಶೋಧನಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಇಷ್ಟವಾಗುವುದು. ಅದೃಷ್ಟವು ಎಲ್ಲದರಲ್ಲೂ ಯಶಸ್ಸನ್ನು ನೀಡುವುದು. ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಕಷ್ಟಕರ ಸಂದರ್ಭಗಳು ಗೋಚರಿಸುತ್ತವೆ, ವ್ಯವಹಾರದಲ್ಲಿ ಚಿಂತನಶೀಲವಾಗಿ ಕೆಲಸ ಮಾಡಬೇಕು. ಸಂಪೂರ್ಣ ಶಕ್ತಿಯನ್ನು ಬಳಸಿ ಕೆಲಸ ಮಾಡಬೇಕಾಗುವುದು. ಒತ್ತಡವೂ ಅಧಿಕವಾಗಿ ಇರುವುದು. ಕುಟುಂಬದಲ್ಲಿ ದಾಯಾದಿಗಳ ಜೊತೆ ವಿವಾದ ಉಂಟಾಗುವ ಸಾಧ್ಯತೆಯಿದೆ. ವಿವಾದವು ಯಾವುದೇ

ದ್ವಾದಶ ರಾಶಿಗಳ ವಾರ‌ಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ Read More »

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎ. 21ರಂದು ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿ ನೇಹಾ ಕೆ. ಉದಪುಡಿ, ಸುಧೀಶ್ ಕೆ.ಆರ್. ಶೆಟ್ಟಿ, ಸುಜಿತ್ ಡಿ.ಕೆ., ವರ್ಷ ಹೆಚ್.ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ Read More »

ಅಮರಾವತಿ: ಪಲ್ಟಿಯಾದ ಲಾರಿಯಿಂದ 7 ಕೋಟಿ ರೂ. ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್ : ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಎರಡನೇ ಬಾರಿ ದೊಡ್ಡ ಮೊತ್ತದ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಾಹನ ವಿಜಯವಾಡದಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪೂರ್ವ ಗೋದಾವರಿ ಪೊಲೀಸರು ವಾಹನದಿಂದ 7 ಬಾಕ್ಸ್ಗಳಲ್ಲಿ ತುಂಬಿದ್ದ 7 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ನಲ್ಲಜರ್ಲ ಮಂಡಲದ ಅನಂತಪಲ್ಲಿ ಎಂಬಲ್ಲಿ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ವಾಹನ

ಅಮರಾವತಿ: ಪಲ್ಟಿಯಾದ ಲಾರಿಯಿಂದ 7 ಕೋಟಿ ರೂ. ವಶಕ್ಕೆ ಪಡೆದ ಪೊಲೀಸರು Read More »

ಕಡಬ: ಸಿಡಿಲು‌ ಬಡಿದು ಓರ್ವ ಸಾವು, ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಇಚಿಲಂಪಾಡಿಯ ಕುರಿಯಾಳ ಕೊಪ್ಪ ಎಂಬಲ್ಲಿ ಮರಳು ತೆಗೆದು ಶೆಡ್ ನಲ್ಲಿ ಮೂವರು ಕುಳಿತಿದ್ದ ವೇಳೆ ಸಿಡಿಲು ಬಡಿದಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಕಡಬ: ಸಿಡಿಲು‌ ಬಡಿದು ಓರ್ವ ಸಾವು, ಇಬ್ಬರು ಗಂಭೀರ Read More »

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ

ಭಿಕ್ಷುಕರಿಗೆ (ಆಹಾರ+ನೀರು+ಬಟ್ಟೆ) ನೀಡಿ.  ಆದರೆ ನಗದಾಗಿ ಒಂದು ರೂಪಾಯಿಯನ್ನು ಕೊಡಬೇಡಿ. ಯಾವುದೇ ರೀತಿಯ ವ್ಯಕ್ತಿ (ಹೆಣ್ಣು/ಗಂಡು/ವೃದ್ಧ/ಅಂಗವಿಕಲ/ಮಕ್ಕಳು) ಭಿಕ್ಷೆ ಬೇಡಿದರೆ ಹಣದ ಬದಲು (ಆಹಾರ+ನೀರು+ಬಟ್ಟೆ) ಕೊಟ್ಟರೆ. ಇದರ ಪರಿಣಾಮವಾಗಿ, ಅಂತರರಾಷ್ಟ್ರೀಯ / ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ, ‘ಭಿಕ್ಷುಕರ’ ಗುಂಪುಗಳು ಒಡೆಯುತ್ತವೆ ಮತ್ತು ನಂತರ ಮಕ್ಕಳ ಅಪಹರಣವು ನಿಲ್ಲುತ್ತದೆ. ಪ್ರಾರಂಭಿಸಿ ಪೋಸ್ಟ್ ಅನ್ನು ಹಂಚಿಕೊಳ್ಳಿ. *ದಯವಿಟ್ಟು ಭಿಕ್ಷುಕನಿಗೆ ಒಂದು ರೂಪಾಯಿ ಕೊಡಬೇಡಿ.ನಿಮಗೆ ಮನಸ್ಸಿದ್ದರೆ ಬಿಸ್ಕತ್ತುಗಳನ್ನು ಕಾರಿನಲ್ಲಿ ಇಟ್ಟುಕೊಳ್ಳಿ. ಆದರೆ ನಗದು ಕೊಡಬೇಡಿ*

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ Read More »

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಸಮಗ್ರ ನ್ಯೂಸ್: ಬೆಂಗಳೂರಿನ ಸಂಜಯನಗರದಲ್ಲಿ ಹೈಕೋರ್ಟ್‌ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚೈತ್ರಾ ಮೃತ ದುರ್ದೈವಿ. ಇಕೆಯ ಪತಿ ಕೆಐಎಡಿಬಿ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ವಾಪಸ್‌ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಶಿವಕುಮಾರ್ ಹಾಗೂ ಚೈತ್ರಾ ಮದುವೆಯಾಗಿದ್ದರು. ದಂಪತಿಗೆ 5 ವರ್ಷದ ಒಂದು ಮಗು ಇದೆ. ಇವರು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಸಮಗ್ರ ನ್ಯೂಸ್: ಬೆಂಗಳೂರಿನ ಸಂಜಯನಗರದಲ್ಲಿ ಹೈಕೋರ್ಟ್‌ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚೈತ್ರಾ ಮೃತ ದುರ್ದೈವಿ. ಇಕೆಯ ಪತಿ ಕೆಐಎಡಿಬಿ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ವಾಪಸ್‌ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಶಿವಕುಮಾರ್ ಹಾಗೂ ಚೈತ್ರಾ ಮದುವೆಯಾಗಿದ್ದರು. ದಂಪತಿಗೆ 5 ವರ್ಷದ ಒಂದು ಮಗು ಇದೆ. ಇವರು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಅಣ್ಣಿಗೇರಿ: ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್‌ : ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ. ಬಸವ ಜಯಂತಿ ಹಿನ್ನೆಲೆ ಮಜ್ಜಿಗುಡ್ಡ ಗ್ರಾಮದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವ ನಡೆದಿತ್ತು. ಸಂಜೆ ಸಾವಿರಾರು ಭಕ್ತರ ಮಧ್ಯೆ ರಥೋತ್ಸವ ಕೂಡ ನಡೆದಿತ್ತು. ತೇರು ಎಳೆಯುತ್ತಿದ್ದಂತೆ ಅಲ್ಲಿ ಸೇರಿದ್ದ ಭಕ್ತರು ತೇರಿಗೆ ಉತ್ತುತ್ತಿ ಹಣ್ಣುಗಳನ್ನು ತೂರಲಾರಂಭಿಸಿದರು. ಈ ವೇಳೆ ಬಾಬಾಸಾಬ್ ಮುಕಾಶಿ ಎಂಬಾತ ಉತ್ತುತ್ತಿ ಹಣ್ಣುಗಳನ್ನು ಆರಿಸಿಕೊಳ್ಳಲು ತೇರಿನ ಹತ್ತಿರ ಧಾವಿಸಿದ ವೇಳೆ ತೇರಿನ ಚಕ್ರಕ್ಕೆ ಸಿಲುಕಿದ್ದಾನೆ. ಇದರಿಂದ

ಅಣ್ಣಿಗೇರಿ: ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಮೃತ್ಯು Read More »