May 2024

ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ

ಸಮಗ್ರ ನ್ಯೂಸ್ : ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7 ಗಂಟೆಗೆ ತೆರೆದರೆ, ಗಂಗೋತ್ರಿ ದೇವಾಲಯವು ಮಧ್ಯಾಹ್ನ 12.20 ತೆರೆಯುತ್ತದೆ. ಮೇ 12 ರಂದು ಬೆಳಗ್ಗೆ 6 ಗಂಟೆಗೆ ಉತ್ತರಾಖಂಡದ ಚಾರ್ಧಾಮ್ ಯಾತ್ರೆಯ ಭಾಗವಾಗಿರುವ ಬದರಿನಾಥ್ ಅನ್ನು ತೆರೆಯಲಿದೆ. 6 ತಿಂಗಳಿಗೆ ಒಮ್ಮೆ ತೆರೆಯುವ ಈ ಯಾತ್ರಾ ಸ್ಥಳಗಳಿಗೆ ದೇಶ-ವಿದೇಶಗಳಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗೂ ಬದರಿನಾಥ್ ಹೀಗೆ […]

ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ Read More »

ಬಳ್ಳಾರಿ: ಜಿಂದಾಲ್ನ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ಸಮಗ್ರ ನ್ಯೂಸ್ : ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ. ಮೃತರನ್ನು ಭುವನಹಳ್ಳಿಯ ಜಡೆಪ್ಪ(23), ಬೆಂಗಳೂರಿನ ಸುಶಾಂತ್(25), ಚೆನ್ನೈನ ಶಿವಮಹದೇವ(23) ಎಂದು ಗುರುತಿಸಲಾಗಿದೆ. ಪೈಪ್ ಜೋಡಣೆ ಕೆಲಸ ಪರಿಶೀಲನೆ ಮಾಡುತ್ತಿದ್ದಾಗ ಬೃಹತ್ ಪೈಪ್ನಲ್ಲಿ ಇದ್ದಕ್ಕಿದ್ದಂತೆ ಬಂದ ನೀರಿನಲ್ಲಿ ಕೊಚ್ಚಿಹೋಗಿ ದೊಡ್ಡ ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಸಂಡೂರು ಡಿವೈಎಸ್ಪಿ ಪ್ರಸಾದ್ ಗೋಖಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗುರುವಾರ ಸಂಜೆ

ಬಳ್ಳಾರಿ: ಜಿಂದಾಲ್ನ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು Read More »

ಮೈಸೂರು: “ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್| ಸಂಸದ ಪ್ರತಾಪ್ ಸಿಂಹ ಖಂಡನೆ

ಸಮಗ್ರ ನ್ಯೂಸ್ : ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ ಶ್ರೀರಾಮ ಹಾಡು ಕೋಲಾಹಲ ಸೃಷ್ಟಿಸಿದ್ದು, ಶ್ರೀಹರ್ಷ ಹಾಡಿದ ಈ ಹಾಡಿನಿಂದ ಕಾರ್ಯಕ್ರಮದಲ್ಲಿ ಗಲಾಟೆ ಶುರುವಾಗಿದೆ. ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದ ಹಿಂದೂ ವಿದ್ಯಾರ್ಥಿಗೆ ಥಳಿಸಿದ ಘಟನೆ ನಡೆದಿದೆ. ಇದರ ಫೋಟೋ ಹಾಗೂ ವಿಡಿಯೋವನ್ನು ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಹಿಂದೂ ವಿದ್ಯಾರ್ಥಿಯ ಮೇಲೆ ಹಲ್ಲೆ ಖಂಡಿಸಿದ್ದಾರೆ. ನಿನ್ನೆ ಮೈಸೂರಿನ ಸಂತ

ಮೈಸೂರು: “ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್| ಸಂಸದ ಪ್ರತಾಪ್ ಸಿಂಹ ಖಂಡನೆ Read More »

ಕೊಪ್ಪಳ: ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ. ಈರಪ್ಪ ಕುರಿ (55) ಮೃತ ಕುರಿಗಾಯಿ. ಕುರಿಗಳಿಗೆ ಗಿಡದ ಸೊಪ್ಪು ಕತ್ತರಿಸಿ ಹಾಕುವಾಗ ನಡೆದ ಈ ಅವಘಡ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಿಂಡ್ ಪವರ್ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಮೃತ ದೇಹ ಪೊಲೀಸರಿಗೆ ಹಸ್ತಾಂತರಿಸದೇ ಕಂಪನಿಯ ವಿರುದ್ದ ಪ್ರತಿಭಟನೆ ಮಾಡಿದ್ದಾರೆ. ಪ್ರಕರಣ ಕುಕನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಪ್ಪಳ: ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ

ಸಮಗ್ರ ನ್ಯೂಸ್: ಬಿಜೆಪಿಯ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2022 ರಲ್ಲಿ ಪ್ರವೀಣ್ ನೆಟ್ಟಾರನ್ನು ಬೆಳ್ಳಾರೆಯ ನೆಟ್ಟಾರು ಸಮೀಪದ ಅವರ ಅಂಗಡಿ ಬಳಿ ಹತ್ಯೆ ನಡೆಸಲಾಗಿತ್ತು.‌ ಈ ಪ್ರಕರಣದಲ್ಲಿ ಹಲವು ಆರೋಪಿಗಳನ್ನು ಎನ್ಐಎ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಅನ್ನು ಹಾಸನದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ Read More »

ನವದೆಹಲಿ: ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ- ಆರ್ಥಿಕ ಸಲಹಾ ಮಂಡಳಿ

ಸಮಗ್ರ ನ್ಯೂಸ್ : ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ, ಭಾರತ ಮತ್ತು ನೆರೆ ರಾಷ್ಟ್ರಗಳಲ್ಲಿ ಧರ್ಮದ ಆಧಾರದಲ್ಲಿ ಜನಸಂಖ್ಯೆ ಹೆಚ್ಚಳ ಆಗಿರುವ ವರದಿಯನ್ನು ಪ್ರಕಟ ಮಾಡಿದೆ. 1950 ಮತ್ತು 2015ರ ನಡುವೆ 167 ದೇಶಗಳಲ್ಲಿರುವ ಧರ್ಮಗಳನ್ನು ಅಧ್ಯಯನ ಮಾಡಿ ಜನಸಂಖ್ಯಾ ಹೆಚ್ಚಳ ಕುರಿತು ವರದಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ಮಧ್ಯೆ ಈ ವರದಿ ಮತ್ತೊಂದು

ನವದೆಹಲಿ: ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ- ಆರ್ಥಿಕ ಸಲಹಾ ಮಂಡಳಿ Read More »

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು

ಸಮಗ್ರ ನ್ಯೂಸ್ : ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ. ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಾರ್ಖಾನೆ ಪರವಾನಗಿ ಪಡೆದ ಘಟಕವಾಗಿದ್ದು, ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದೆ. ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಗುರುತಿಸಲಾಗಿದೆ. ಸ್ಫೋಟದ ನಂತರ ಇಡೀ ಕಾರ್ಖಾನೆಗೆ

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು Read More »

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ| ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್

ಸಮಗ್ರ ನ್ಯೂಸ್ : ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಎದುರು 60 ರನ್ಗಳ ಭರ್ಜರಿ ಜಯ ಗಳಿಸಿದ್ದು, ಪ್ಲೇಆಫ್ ಹಾದಿಯನ್ನು ಸುಗಮವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಕ್ಯಾಮರೂನ್ ಗ್ರೀನ್ ಬಿರುಸಿನ ಬ್ಯಾಟಿಂಗ್ ಫಲವಾಗಿ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿತ್ತು. ಬೃಹತ್

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ| ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ Read More »

ಹಾಸನ ವಿಡಿಯೋ ಪ್ರಕರಣ| ಸುಳ್ಳು ದೂರು ನೀಡುವಂತೆ ಒತ್ತಡ

ಸಮಗ್ರ ನ್ಯೂಸ್‌ : ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ ಮಧ್ಯೆ ಅಶ್ಲೀಲ ವಿಡಿಯೋ ಕೇಸ್‌ಗೆ ಮತ್ತೊಂದು ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ದೂರು ಕೊಡಲು ಮಹಿಳೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದೇ ವಿಚಾರಕ್ಕೆ ರಾಷ್ಟ್ರೀಯ ಮಹಿಳಾ

ಹಾಸನ ವಿಡಿಯೋ ಪ್ರಕರಣ| ಸುಳ್ಳು ದೂರು ನೀಡುವಂತೆ ಒತ್ತಡ Read More »

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಸಮಗ್ರ ನ್ಯೂಸ್‌ : ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ. ವಿರೂಪಾಕ್ಷ ಕೊಲೆ ಮಾಡಿದ ಹುಚ್ಚ ಪ್ರೇಮಿ. ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ. ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ Read More »