May 2024

ಸುರಪುರ ಉಪಚುನಾವಣೆ ಮತದಾನದ ವೇಳೆ ಹೈಡ್ರಾಮಾ! ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ

ಸಮಗ್ರ ನ್ಯೂಸ್: ಯಾದಗಿರಿಯ ಸುರಪುರ ಉಪಚುನಾವಣೆ ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದೆ. ಪರಸ್ಪರ ಎರಡು ಪಕ್ಷದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಓರ್ವನ ತಲೆಗೆ ಗಂಭೀರ ಗಾಯವಾಗಿದೆ.ಇದರಿಂದ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ‌ ದೌಡಾಯಿಸಿ ಪೊಲೀಸರು […]

ಸುರಪುರ ಉಪಚುನಾವಣೆ ಮತದಾನದ ವೇಳೆ ಹೈಡ್ರಾಮಾ! ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ Read More »

ಬಂಗಾಳದ 25 ಸಾವಿರ ಶಿಕ್ಷಕರ ವಜಾ/ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದೇ ವೇಳೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ 25,753 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಿ ಏಪ್ರಿಲ್ 22ರಂದು ಕಲ್ಕತ್ತಾ ಹೈಕೋರ್ಟ್

ಬಂಗಾಳದ 25 ಸಾವಿರ ಶಿಕ್ಷಕರ ವಜಾ/ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್ Read More »

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿರುವ ರಾಮ ಮಂದಿರ ನಿಷ್ಟ್ರಯೋಜಕ ಆಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಮ್ಮ ದೇಶದಲ್ಲಿ ದೇವಸ್ಥಾನಗಳನ್ನು ಈ ರೀತಿ ನಿರ್ಮಿಸಿಲ್ಲ. ರಾಮ ಮಂದಿರವನ್ನು ವಾಸ್ತು ಪ್ರಕಾರ ನಿರ್ಮಿಸಿಲ್ಲ. ನಾನು ಪ್ರತಿದಿನ ರಾಮನನ್ನು ಆರಾಧಿಸುತ್ತೇನೆ. ಕೆಲವರು ರಾಮನವಮಿಯಂದು ಪೇಟೆಂಟ್ ಮಾಡಿದ್ದಾರೆ. ಆದರೆ ಅಯೋಧ್ಯೆಯಲ್ಲಿರುವ ಆ ದೇವಾಲಯವು ನಿಷ್ಟ್ರಯೋಜಕ ಆಗಿದೆ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮತ ಬ್ಯಾಂಕ್ ರಾಜಕೀಯಕ್ಕಾಗಿ

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್ Read More »

ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಎಐಸಿಸಿ ವಕ್ತಾರೆ, ರಾಜಸ್ಥಾನದ ನಾಯಕಿ ರಾಧಿಕಾ ಖೇರಾ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅವರು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ರಾಮನ ಭಕ್ತಿ ಎಂಬ ಕಾರಣಕ್ಕೆ, ರಾಮಲಲಾನ ದರುಶನ ಪಡೆದಿದ್ದಕ್ಕೆ ಕೌಶಲ್ಯ ಮಾತೆಯ ಭೂಮಿಯಲ್ಲಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ ರೀತಿ ಕರಾಳವಾಗಿದೆ. ಬಿಜೆಪಿ ಸರ್ಕಾರದ ರಕ್ಷಣೆ ಸಿಗದಿದ್ದರೆ ನಾನು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಇಂದಿನ ಕಾಂಗ್ರೆಸ್ ಮಹಾತ್ಮ ಗಾಂಧಿಯವರ ಕಾಂಗ್ರೆಸ್ ಆಗಿ ಉಳಿದಿಲ್ಲ.

ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ Read More »

ಬೆಂಗಳೂರಿನ ಗಲ್ಲಿಗಳಲ್ಲಿ ರಾರಾಜಿಸಿದ ‘ಲುಲು’ಕುಮಾರ, ‘ಬೋಸು ಡಿಕೆ’, ‘ರಾಜಕೀಯ ವ್ಯಭಿಚಾರಿ’ ಪೋಸ್ಟರ್| ಡಿಸಿಎಂ ಡಿ.ಕೆ ಶಿವಕುಮಾರ್ ‌ಗೆ ಭಾರೀ ಮುಖಭಂಗ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇ ಸಿಎಂ ಅಭಿಯಾನ ನಡೆಸಿದ್ದ ಕಾಂಗ್ರೆಸ್‌ ಮೇಲೆ ಇದೀಗ ಅದರ ತಂತ್ರವೇ ತಿರುಮಂತ್ರವಾಗಿ ಪರಿಣಮಿಸಿದೆ. ಏಕೆಂದರೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ಆಡಿಯೋ ಆಚೆ ಬರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಕಾರಣ ಎಂದು ವಕೀಲ ದೇವರಾಜೇಗೌಡ ಆರೋಪಿಸಿದ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಪೋಸ್ಟರ್‌ಗಳು ಎಲ್ಲೆಡೆ ರಾಜಾಜಿಸುತ್ತಿವೆ. ನಗರದ ಅನೇಕ ಕಡೆ ರಾತ್ರೋರಾತ್ರಿ ಕೆಲವರು ಪೋಸ್ಟರ್‌ಗಳನ್ನು ಅಂಟಿಸಿ ಮುಖ್ಯಮಂತ್ರಿ

ಬೆಂಗಳೂರಿನ ಗಲ್ಲಿಗಳಲ್ಲಿ ರಾರಾಜಿಸಿದ ‘ಲುಲು’ಕುಮಾರ, ‘ಬೋಸು ಡಿಕೆ’, ‘ರಾಜಕೀಯ ವ್ಯಭಿಚಾರಿ’ ಪೋಸ್ಟರ್| ಡಿಸಿಎಂ ಡಿ.ಕೆ ಶಿವಕುಮಾರ್ ‌ಗೆ ಭಾರೀ ಮುಖಭಂಗ Read More »

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವಿನ ನಡುವೆ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ರಾಜ್ಯದಲ್ಲಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿರುವುದಾಗಿ ಮೂವರು ಪಕ್ಷೇತರ ಶಾಸಕರು ಮಂಗಳವಾರ ಘೋಷಿಸಿದ್ದಾರೆ. ಮೂವರು ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಅವರು ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. ಇದರಿಂದ ಸೈನಿ ಸರ್ಕಾರವು ಬಹುಮತ ಕಳೆದುಕೊಂಡಿದ್ದು, ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದೆ. ಸರ್ಕಾರ ಪತನದ ಸನಿಹದಲ್ಲಿದ್ದು,

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ Read More »

ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಶಾಂತಿಯುತ| ಉತ್ಸಾಹದಿಂದ ಮತ ಚಲಾಯಿಸಿದ ಉತ್ತರ ಕರ್ನಾಟಕ ಮಂದಿ

ಸಮಗ್ರ ನ್ಯೂಸ್: ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದ ದೃಶ್ಯ ಕಂಡುಬಂತು. ಸಂಜೆ 5 ಗಂಟೆ ವೇಳೆಗೆ ಸರಾಸರಿ ಶೇ.66.05ರಷ್ಟು ಮತದಾನವಾಗಿ, ಮತದಾನ ಮಕ್ತಾಯದ ವೇಳೆಗೆ ಶೇ.70ಕ್ಕೂ ಹೆಚ್ಚು ಮತದಾನವಾಗಿದ್ದು,ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆಯುವ ಮತದಾರರು ಉತ್ಸಾಹದಿಂದ ಮತದಾನ ಮಾಡುತ್ತಿರುವುದು ಅಲ್ಲಲ್ಲಿ ಕಂಡುಬಂದಿತು. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ

ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಶಾಂತಿಯುತ| ಉತ್ಸಾಹದಿಂದ ಮತ ಚಲಾಯಿಸಿದ ಉತ್ತರ ಕರ್ನಾಟಕ ಮಂದಿ Read More »

ಬೀದರ್: ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಸಮಗ್ರ ನ್ಯೂಸ್‌ : ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. ಮೊದಲಿಗೆ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಮುಂದಿನ ಬಟನ್ ಒತ್ತಿದ್ದಂತೆ ಮಾಡುವ ಮತದಾನ ನಂತರ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾಗೆ ಮತ ಹಾಕಿ ಸನ್ನೆ ಮಾಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯಾರಿಗೆ ಮತದಾನ ಮಾಡಲಾಗಿದೆ ಎಂಬುದುನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಕಾನೂನಿನ ಪ್ರಕಾರ ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಆದರೆ, ಮತದಾರ

ಬೀದರ್: ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ Read More »

ಬಿಸಿರೋಡ್: ಹೋಟೆಲ್ ವೊಂದರಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾದಲ್ಲಿ ರೂಮ್ ಮಾಡಿದ್ದ, ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಇದ್ದ

ಬಿಸಿರೋಡ್: ಹೋಟೆಲ್ ವೊಂದರಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ Read More »

ಗುಜರಾತ್‌: ಕಾಲಿನ ಮೂಲಕ ಮತದಾನ ಮಾಡಿ ಎಲ್ಲರಿಗೂ ಸ್ಫೂರ್ತಿಯಾದ ಯುವಕ

ಸಮಗ್ರ ನ್ಯೂಸ್‌ : ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಯುವಕನೊಬ್ಬ ಕಾಲುಗಳ ಮೂಲಕ ತಮ್ಮ ಹಕ್ಕು ಚಲಾಯಿಸಿ ಎಲ್ಲರಿಗೂ ಸ್ಫೂರ್ತಿಯಾದ ಘಟನೆ ನಡೆದಿದೆ. ಯುವಕ ಅಂಕಿತ್‌ ಸೋನಿಯ ಮತದಾನ ಮಾಡಿದ ಬಳಿಕ ಮಾತನಾಡಿ, 20 ವರ್ಷಗಳ ಹಿಂದೆ ಎಲೆಕ್ಟ್ರಿಕ್‌ ಶಾಕ್‌ ನಿಂದ ನನ್ನ ಎರಡೂ ಕೈಗಳನ್ನು ಕಳೆದುಕೊಂಡೆ. ನನ್ನ ಗುರುಗಳು ಮತ್ತು ಶಿಕ್ಷಕರ ಆಶೀರ್ವಾದದಿಂದ ನಾನು ಚಿತ್ರ ಬಿಡಿಸಲು ಪ್ರಾರಂಭಿಸಿದೆ. ನಂತರ ಬರೆಯಲು ಪ್ರಾರಂಭಿಸಿದೆ. ಇದಾದ ಬಳಿಕ ನಾನು ಶಾಲೆಗೆ ಹೋಗಲು ಪ್ರಾರಂಭಿಸಿದೆ. ನಾನು ಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ

ಗುಜರಾತ್‌: ಕಾಲಿನ ಮೂಲಕ ಮತದಾನ ಮಾಡಿ ಎಲ್ಲರಿಗೂ ಸ್ಫೂರ್ತಿಯಾದ ಯುವಕ Read More »